ಶೋಷಣೆಯಿಂದ ಹೊರಬರಲು ಶಿಕ್ಷಣವೇ ಅಸ್ತ್ರ

kknr-1
ಕುಕನೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಛಲವಾದಿ ಜಾಗೃತಿ ವೇದಿಕೆಯಿಂದ 2025 ನೇ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಪೂರ್ವಭಾವಿ ಸಭೆಗೆ ಚಾಲನೆ ನೀಡಲಾಯಿತು. ವೇದಿಕೆ ಸಂಚಾಲಕ ಕೃಷ್ಣ ಇಟ್ಟಂಗಿ ಪೂಜೆ, ಮುಖಂಡರಾದ ರಾಮಣ್ಣ ಬಂಕದಮನಿ, ಛತ್ರಪ್ಪ ಛಲವಾದಿ, ಶಂಕರ್ ಛಲವಾದಿ ಇತರರಿದ್ದರು.
Published on

ಕುಕನೂರು: ಶಿಕ್ಷಣಕ್ಕಿಂತ ಬಲವಾದ ಅಸ್ತ್ರ ಮತ್ತೊಂದಿಲ್ಲ. ಉತ್ತಮ ಶಿಕ್ಷಣ ಪಡೆವ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆಯಬಹುದು ಎಂದು ಜಿಲ್ಲಾ ಛಲವಾದಿ ಜಾಗೃತಿ ವೇದಿಕೆ ಸಂಚಾಲಕ ಕೃಷ್ಣ ಇಟ್ಟಂಗಿ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಛಲವಾದಿ ಜಾಗೃತಿ ವೇದಿಕೆಯಿಂದ 2025ನೇ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಇತ್ತೀಚೆಗೆ ಮಾತನಾಡಿದರು.

ಹಿಂದುಳಿದ ಸಮಾಜದಿಂದ ಬಂದಿರುವ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ, ಗೌರವಿಸಿ, ಪ್ರೋತ್ಸಾಹಿಸುವ ಮೂಲಕ ಅವರನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪ್ರತಿಭಾ ಪುರಸ್ಕಾರಕ್ಕಾಗಿ ವಿದ್ಯಾರ್ಥಿಗಳು ಹೆಸರುಗಳನ್ನು ಜು.15 ರೊಳಗೆ ನೋಂದಾಯಿಸಿಕೊಳ್ಳಬೇಕು ಎಂದರು.

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಛಲವಾದಿ ಸಮಾಜದ ವಿದ್ಯಾರ್ಥಿಗಳಿಗೆ ಮತ್ತು ಎಂಬಿಬಿಎಸ್‌ಗೆ ಆಯ್ಕೆಯಾದ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಸರ್ಕಾರಿ ಉದ್ಯೋಗ ಪಡೆದ ಪ್ರತಿಭಾವಂತರಿಗೆ ಆಗಸ್ಟ್‌ನಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಸಲು ನಿರ್ಧರಿಸಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net