ಬಿಜೆಪಿ ಸರ್ಕಾರ ನಿಷ್ಕ್ರಿಯ; ಮಾಜಿ ಸಚಿವ ರಾಯರಡ್ಡಿ ಆರೋಪ ಕಾಂಗ್ರೆಸ್ ಸದಸ್ಯತ್ವ ಅಭಿಯಾನ

11122021 Kuknoor congress compeing
Published on

ಕುಕನೂರು: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಕುಕನೂರನ್ನು ರಾಜ್ಯದಲ್ಲಿಯೇ ಮಾದರಿ ತಾಲೂಕನ್ನಾಗಿ ಮಾಡುವುದಾಗಿ ಮಾಜಿ ಸಚಿವ ಬಸವರಾಜ ರಾಯರಡ್ಡಿ ಹೇಳಿದರು.

ಪಟ್ಟಣದ ಎಪಿಎಂಸಿ ಮಳಿಗೆಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಿಜೆಪಿ ಸರ್ಕಾರ ನಿಷ್ಕ್ರಿಯ ಆಗಿದೆ. ಹೊಸ ತಾಲೂಕುಗಳಲ್ಲಿ ಮೂಲ ಸೌಕರ್ಯ ಕಲ್ಪಿಸದ್ದಕ್ಕೆ ಹೈಕೋರ್ಟ್ ಇತ್ತೀಚಿಗೆ ಛೀಮಾರಿ ಹಾಕಿದೆ. ಆದರೂ, ಸರ್ಕಾರ ಯಾವುದಕ್ಕೂ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ದೂರಿದರು.

ಯಲಬುರ್ಗಾ ಕ್ಷೇತ್ರದಲ್ಲಿ 10 ಸಾವಿರಕ್ಕೂ ಹೆಚ್ಚು ಜನರನ್ನು ಕಾಂಗ್ರೆಸ್ ಸದಸ್ಯರಾಗಿ ನೋಂದಣಿ ಮಾಡಿಸಲಿಸಿದ್ದೇವೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣೇಗೌಡ ಬಯ್ಯಪೂರ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್ 10 ರಿಂದ 12 ಸ್ಥಾನ ಗೆಲ್ಲಲಿದೆ. ಕುಕನೂರು ಪಪಂ ಚುನಾವಣೆಗೆ ಕಾಂಗ್ರೆಸ್ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದು, ಬಹುಮತದಿಂದ ಕಾಂಗ್ರೆಸ್ ಬೆಂಬಲಿಸಬೇಕು ಎಂದು ರಾಯರಡ್ಡಿ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net