ಎಚ್ಚೆತ್ತುಕೊಳ್ಳದಿದ್ದರೆ ನಿಷೇಧಾಜ್ಞೆ ಜಾರಿ- ಬೆಣಕಲ್ಲ ಗ್ರಾಮಸ್ಥರಿಗೆ ಶಾಸಕ ಹಾಲಪ್ಪ ಆಚಾರ್ ಎಚ್ಚರಿಕೆ

Halappa Acharya Visti Benakal Village
ಕುಕನೂರು ತಾಲೂಕಿನ ಬೆಣಕಲ್ಲ ಗ್ರಾಮದಲ್ಲಿ ಭಾನುವಾರ ಶಾಸಕ ಹಾಲಪ್ಪ ಆಚಾರ್ ಗ್ರಾಮಸ್ಥರೊಂದಿಗೆ ಕರೊನಾ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಿದರು.
Published on

ಕುಕನೂರು: ತಾಲೂಕಿನ ಬೆಣಕಲ್ಲ ಗ್ರಾಮದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಜಾಗೃತರಾಗಿರಬೇಕು. ಇಲ್ಲದಿದ್ದಲ್ಲಿ ನಿಷೇಧಾಜ್ಞೆ ಜಾರಿಗೆ ಸೂಚಿಸಲಾಗುವುದು ಎಂದು ಶಾಸಕ ಹಾಲಪ್ಪ ಆಚಾರ್ ಹೇಳಿದರು.

ಭಾನುವಾರ ಬೆಣಕಲ್ಲ ಗ್ರಾಮಕ್ಕೆ ಭೇಟಿ ನೀಡಿದ್ದ ಅವರು ಕರೊನಾ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿ ಮಾತನಾಡಿದರು. ಗ್ರಾಮದಲ್ಲಿ 26 ಜನರಿಗೆ ಸೋಂಕು ದೃಢಪಟ್ಟಿದೆ. ಸೋಂಕಿತರ ಜತೆಗೆ ಯಾರೂ ಸಂಪರ್ಕದಲ್ಲಿರಬಾರದು. ಸೋಂಕಿತರು ಹೋಮ್ ಐಸೋಲೇಷನ್‌ನಲ್ಲಿದ್ದರೆ ಮನೆಯಿಂದ ಹೊರಗೆ ಬರಬಾರದು. ಜನರು ಗ್ರಾಮದಲ್ಲಿ ಗುಂಪು ಸೇರಬಾರದು. ಕರೊನಾವನ್ನು ಹಗುರವಾಗಿ ಪರಿಗಣಿಸಬಾರದು. ಜೀವನ ನಿರ್ವಹಣೆಗೆ ಕಷ್ಟದಲ್ಲಿದ್ದವರಿಗೆ ಆಹಾರ ಸಾಮಗ್ರಿ ವಿತರಿಸಲು ತಹಸೀಲ್ದಾರ್‌ಗೆ ಸೂಚಿಸಲಾಗುವುದು ಎಂದು ಹೇಳಿದರು.

ತಹಸೀಲ್ದಾರ್ ಕಿರಣ್ ಕುಮಾರ್ ಕುಲಕರ್ಣಿ, ಟಿಎಚ್‌ಒ ಮಂಜುನಾಥ ಬ್ಯಾಲಹುಣಸಿ, ಪಿಎಸ್‌ಐ ಎನ್.ವೆಂಕಟೇಶ, ಗ್ರಾಪಂ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net