

ಕುಕನೂರು: ಮಾನವನ ದುರಾಸೆಯಿಂದ ಪರಿಸರ ಹಾಳಾಗುತ್ತಿದೆ. ನೈಸರ್ಗಿಕ ಸಂಪತ್ತನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕೊಪ್ಪಳ ವಿವಿ ಕುಲಪತಿ ಪ್ರೊ.ಬಿ.ಕೆ. ರವಿ ಹೇಳಿದರು.
ತಾಲೂಕಿನ ತಳಕಲ್ ಇಂಜಿನಿಯರ್ ಕಾಲೇಜ್‌ನ ಕೊಪ್ಪಳ ವಿವಿಯಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನ ಕಾರ್ಯಕ್ರಮವನ್ನು ಗುರುವಾರ ಸಸಿಗೆ ನೀರೆರೆವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಪ್ಲಾಸ್ಟಿಕ್ ಮಾಲಿನ್ಯ ಕೊನೆಗೊಳಿಸುವುದು ವಿಶ್ವ ಪರಿಸರ ದಿನದ ಥೀಮ್ ಆಗಿದೆ. ಪ್ಲಾಸ್ಟಿಕ್ ತ್ಯಾಜ್ಯ ಪರಿಸರ ಮತ್ತು ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುವ ಕಾರಣ ಬಳಕೆಯನ್ನು ನಿಯಂತ್ರಿಸಬೇಕಾಗಿದೆ. ಪರಿಸರ ರಕ್ಷಣೆ ಮೊದಲ ಹೆಜ್ಜೆಯಾಗಬೇಕು. ಪ್ಲಾಸ್ಟಿಕ್ ಬಳಕೆ ತಗ್ಗಿಸದಿದ್ದರೆ ಭವಿಷ್ಯದ ಪೀಳಿಗೆಗೆ ಪರಿಸರ ಉಳಿಯುವುದಿಲ್ಲ ಎಂದರು.
ವಿವಿ ಕುಲಸಚಿವ ಪ್ರೊ.ಕೆ.ವಿ.ಪ್ರಸಾದ್, ಯಲಬುರ್ಗಾ ಸ್ನಾತಕೋತ್ತರ ಕೇಂದ್ರದ ಆಡಳಿತಾಧಿಕಾರಿ ಕೆ.ಎಚ್.ಛತ್ರದ, ಆಡಳಿತಾಧಿಕಾರಿ ತಿಮ್ಮಾರೆಡ್ಡಿ ಮೇಟಿ ಹಾಗೂ ಸಿಂಡಿಕೇಟ್ ಸದಸ್ಯರು, ಬೋಧಕ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.