

ಕುಕನೂರು: ಪತ್ರಿಕೆಗಳನ್ನು ಓದುವುದರಿಂದ ನೈಜ ಜ್ಞಾನ ಸಂಪತ್ತು ದೊರೆಯಲ್ಲಿದ್ದು, ಪತ್ರಕರ್ತರಿಗೆ ಸಾಮಾಜಿಕ ಜವಾಬ್ದಾರಿ ಹೆಚ್ಚಿದೆ ಎಂದು ತಾಪಂ ಮಾಜಿ ಉಪಾಧ್ಯಕ್ಷ ಕಳಕಪ್ಪ ಕಂಬಳಿ ಹೇಳಿದರು.
ಪಟ್ಟಣದ ಅನ್ನದಾನೀಶ್ವರ ಶಾಖಾ ಮಠದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕ ಘಟಕದಿಂದ ಮಂಗಳವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪತ್ರಿಕೆಗಳು ಸಾಮಾಜಿಕ ವಿಷಯದ ಮೇಲೆ ಬೆಳಕು ಚೆಲ್ಲುತ್ತವೆ. ಜಾಗೃತಿ ಮೂಡಿಸುವ ಹಾಗೂ ಸರ್ಕಾರವನ್ನು ಬಡಿದೆಬ್ಬಿಸುವ ಕಾರ್ಯ ಮಾಡುತ್ತವೆ ಎಂದರು. ಹಿರಿಯ ಸಾಹಿತಿ ಕೆ.ಬಿ.ಬ್ಯಾಳಿ ಮಾತನಾಡಿದರು.
ಪ್ರಬಂಧ ಸ್ಪರ್ಧೆ: ಪತ್ರಿಕಾ ದಿನಾಚರಣೆ ನಿಮಿತ್ತ ಪಟ್ಟಣದ ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ‘ಮೊಬೈಲ್ ಬಳಕೆ ಪೂರಕವೋ- ಮಾರಕವೋ ?’ ಎಂಬ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ನಡೆಸಲಾಗಿತ್ತು.
ಸ್ಪರ್ಧೆ ವಿಜೇತರಾದ ಅಭಿನಯ (ಪ್ರಥಮ), ಪದ್ಮಾವತಿ ಮತ್ತು ಜ್ಯೋತಿ (ದ್ವೀತಿಯ), ತನುಶ್ರೀ ಮತ್ತು ಭಾನುಶ್ರೀಗೆ (ತೃತಿಯ) ಬಹುಮಾನ ಹಾಗೂ ಪ್ರಮಾಣಪತ್ರ ವಿತರಿಸಲಾಯಿತು. ಸಂಗೀತ ಶಿಕ್ಷಕ ಮುರಾರಿ ಭಜಂತ್ರಿ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.
ಅನ್ನದಾನೀಶ್ವರ ಶಾಖಾ ಮಠದ ಡಾ.ಮಹಾದೇವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾನಿಪ ಸಂಘದ ಜಿಲ್ಲಾಧ್ಯಕ್ಷ ಹನುಮಂತ ಹಳ್ಳಿಕೇರಿ, ಕಾರ್ಯದರ್ಶಿ ವೈ.ನಾಗರಾಜ, ತಾಲೂಕಾಧ್ಯಕ್ಷ ನಾಗರಾಜ ಬೆಣಕಲ್, ತಾಪಂ ಇಒ ಸಂತೋಷ ಪಾಟೀಲ್ ಬಿರಾದಾರ, ಪಪಂ ಅಧ್ಯಕ್ಷೆ ಲಲಿತಮ್ಮ ಯಡಿಯಾಪೂರ, ಉಪಾಧ್ಯಕ್ಷ ಪ್ರಶಾಂತ ಆರುಬೆರಳಿನ್, ಮುಖ್ಯಾಧಿಕಾರಿ ನಬಿಸಾಬ ಕಂದಗಲ್, ಹಾಗೂ ಪತ್ರಕರ್ತರಿದ್ದರು.