

ಕುಕನೂರು: ಮಾಸಿಕ 12 ಸಾವಿರ ರೂ. ಗೌರವ ಧನ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳು ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಇತ್ತೀಚೆಗೆ ಪ್ರತಿಭಟನೆ ನಡೆಸಿದರು.
ಸಂಘ ತಾಲೂಕು ಅಧ್ಯಕ್ಷೆ ಶೋಭಾ ಹೂಗಾರ ಮಾತನಾಡಿ, ರಾಜ್ಯದಲ್ಲಿ ಕರೋನಾ ಪಾಸಿಟಿವ್ ಬಂದ ಆಶಾ ಕಾರ್ಯಕರ್ತರಿಗೆ ಪರಿಹಾರ ಹಾಗೂ ಸಂಪೂರ್ಣ ಉಚಿತ ಚಿಕಿತ್ಸೆ ನೀಡಬೇಕು. ರಾಜ್ಯದ ಆಶಾ ಕಾರ್ಯಕರ್ತೆಯರ ಸಮಸ್ಯೆ ಬಗ್ಗೆ ಈಗಾಗಲೇ ಸಾಕಷ್ಟು ಬಾರಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ. ಆರೋಗ್ಯ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದರೂ ಪ್ರಯೋಜನವಾಗಿಲ್ಲ. ಕೂಡಲೇ ಸರ್ಕಾರ ಬೇಡಿಕೆ ಈಡೇರಿಕೆಗೆ ಮುಂದಾಗಬೇಕೆಂದು ಆಗ್ರಹಿಸಿದರು.
ಆಶಾ ಕಾರ್ಯಕರ್ತೆಯರಾದ ಶಂಕ್ರಮ್ಮ ಹಳ್ಳಿಕೇರಿ, ನೀಲಮ್ಮ ತಟ್ಟಿ, ಅನ್ನಪೂರ್ಣ ಬಡಿಗೇರ, ಲಕ್ಷ್ಮೀದೇವಿ ಮೊಟಮ್ಮನವರು, ವಿಜಯಲಕ್ಷ್ಮೀ ರಾಟಿ, ಗೀತಾ ಅಕ್ಕಿ ಇತರರಿದ್ದರು.