

ಕುಕನೂರು: ತಾಲೂಕಿನ ಬನ್ನಿಕೊಪ್ಪ ಗ್ರಾಮದ ಶ್ರಿ ಚನ್ನಬಸವೇಶ್ವರ ರಥೋತ್ಸವ ಮಂಗಳವಾರ ಅದ್ದೂರಿಯಾಗಿ ನೆರವೇರಿತು.
ಕಳೆದ ಎರಡ್ಮೂರು ದಿನಗಳಿಂದ ಗ್ರಾಮದಲ್ಲಿ ಜಾತ್ರೋತ್ಸವದ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ರಥೋತ್ಸವಕ್ಕೆ ಹರಗುರು ಚರಮೂರ್ತಿಗಳು ಚಾಲನೆ ನೀಡಿದರು. ರಥೋತ್ಸವ ಸಾಗುತ್ತಿದ್ದಂತೆ ಭಕ್ತರು ಉತ್ತತ್ತಿ, ಬಾಳೆಹಣ್ಣು ಸಮರ್ಪಿಸಿ ಭಕ್ತಿ ಮೆರೆದರು.
ಹಿರೇಸಿಂದೋಗಿ-ಬನ್ನಿಕೊಪ್ಪ ಕಪ್ಪತ್ತಮಠದ ಶ್ರೀ ಚಿದಾನಂದ ಸ್ವಾಮೀಜಿ ಹಾಗೂ ಹರಗುರು ಚರಮೂರ್ತಿಗಳು ಸಾನ್ನಿಧ್ಯ ವಹಿಸಿದ್ದರು.