ಕುಕನೂರಿಗೆ ಸಿದ್ದರಾಮಯ್ಯ ಆಗಮನ, ರಾಯರಡ್ಡಿ ಪರ ಪ್ರಚಾರ

SIDDARAMAIH
ಮಾಜಿ ಸಿಎಂ ಸಿದ್ದರಾಮಯ್ಯ
Published on

ಕುಕನೂರು: ಪಟ್ಟಣದ ವಿದ್ಯಾನಂದ ಗುರುಕುಲ ಕಾಲೇಜು ಆವರಣದಲ್ಲಿ ಏ.15 ರಂದು ಸಂಜೆ 5 ಗಂಟೆಗೆ ಯಲಬುರ್ಗಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಸವರಾಜ ರಾಯರಡ್ಡಿ ಪರ ಪ್ರಚಾರ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಎಂದು ಪಕ್ಷದ ವಕ್ತಾರ ಸಂಗಮೇಶ ಗುತ್ತಿ ಹೇಳಿದರು.

ಪಟ್ಟಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸ್ ಪ್ರಮುಖರಾದ ಜಮೀರ್ ಅಹ್ಮದ್, ಬೈರತಿ ಸುರೇಶ, ಡಿಸಿಸಿ ಶಿವರಾಜ ತಂಗಡಗಿ, ಶಾಸಕರಾದ ಅಮರೇಗೌಡ ಬಯ್ಯಪುರ, ರಾಘವೇಂದ್ರ ಹಿಟ್ನಾಳ, ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸೇರಿದಂತೆ ಜಿಲ್ಲಾ ಹಾಗೂ ಕ್ಷೇತ್ರದ ಮುಖಂಡರು, ಕಾರ್ಯಕರ್ತರು ಆಗಮಿಸಲಿದ್ದಾರೆ

ಪ್ರಚಾರ ಸಭೆಯಲ್ಲಿ 15 ಸಾವಿರಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ. ಅನ್ಯ ಪಕ್ಷಗಳನ್ನು ತೊರೆದು ಪ್ರಬಲ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ತಿಳಿಸಿದರು. ನಗರ ಘಟಕದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರೆಹಮಾನಸಾಬ್ ಮಕ್ಕಪ್ಪನವರ್, ಜಿಪಂ ಮಾಜಿ ಅಧ್ಯಕ್ಷ ರಾಮಣ್ಣ ಭಜಂತ್ರಿ, ವಾಲ್ಮೀಕಿ ಸಮಾಜದ ಜಿಲ್ಲಾಧ್ಯಕ್ಷ ರತ್ನಾಕರ ತಳವಾರ, ಪ್ರಮುಖರಾದ ಮಲಿಯಪ್ಪ ಅಣ್ಣಿಗೇರಿ, ಸಿದ್ದಯ್ಯ ಕಳ್ಳಿಮಠ, ಕಾಸಿಂಸಾಬ್ ತಳಕಲ್, ಬಸವರಾಜ ಪಲ್ಲೇದ, ಮಂಜುನಾಥ ಕಡೆಮನಿ, ನಿಂಗಪ್ಪ ಗೊರ್ಲೆಕೊಪ್ಪ, ಹನುಮೇಶ ಕಡೆಮನಿ, ಯಮನೂರಪ್ಪ ಗೊರ್ಲೆಕೊಪ್ಪ, , ಭೀಮಣ್ಣ ನಡುಲಮನಿ, ಈಶಯ್ಯ ಶಿರೂರಮಠ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net