ನವೋದಯ ವಿದ್ಯಾಲಯಕ್ಕೆ ಸಂಸದ ಭೇಟಿ

SABHE
ಕುಕನೂರಿನ ನವೋದಯ ವಿದ್ಯಾಲಯಕ್ಕೆ ಸಂಸದ ರಾಜಶೇಖರ ಹಿಟ್ನಾಳ ಭೇಟಿ ನೀಡಿ ಪಾಲಕರೊಂದಿಗೆ ಘಟನೆ ಕುರಿತು ಚರ್ಚಿಸಿದರು. ಪ್ರಾಚಾರ್ಯೆ ಜಯಾ, ಪಾಲಕರಾದ ಕುಬೇರ ಮಜ್ಜಿಗಿ, ಶಿವಾನಂದ ಪ್ಯಾಟಿ, ಬಸವರಾಜ ಹುಬ್ಬಳ್ಳಿ, ಜಗನ್ನಾಥ ಬಿಸರಳ್ಳಿ, ಹನುಮಂತಪ್ಪ ಹಳ್ಳಿ, ಯಲ್ಲಪ್ಪ ರಕ್ಕಸಗಿ, ಟಿ.ಎನ್.ಚವ್ಹಾಣ್ ಇದ್ದರು.
Published on

ಕುಕನೂರು: ಪಟ್ಟಣದ ನವೋದಯದ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳಿಂದ ಕಿರಿಯ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಸೋಮವಾರ ಸಂಸದ ಕೆ.ರಾಜಶೇಖರ ಹಿಟ್ನಾಳ ಭೇಟಿ ನೀಡಿ ಘಟನೆ ಬಗ್ಗೆ ವಿವರ ಪಡೆದರು.

ಬಳಿಕ ಮಾತನಾಡಿದ ಸಂಸದರು, ವಿದ್ಯಾಲಯದಲ್ಲಿ ಇಂಥ ಘಟನೆ ನಡೆದಿರುವುದು ಖಂಡನೀಯ. ವಿದ್ಯಾರ್ಥಿಗಳು ಶಿಸ್ತು, ಸಂಯಮ ಅಳವಡಿಸಿಕೊಳ್ಳಬೇಕು. ಇಲ್ಲಿ ಶಿಸ್ತು ಕಣ್ಮರೆಯಾಗಿದೆ. ಇದಕ್ಕೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣ. ಈ ತಪ್ಪು ಸರಿಪಡಿಸಿಕೊಂಡು ಜವಾಬ್ದಾರಿಯಿಂದ ಕೆಲಸ ಮಾಡಬೇಕೆಂದು ವಿದ್ಯಾಲಯದ ಪ್ರಾಚಾರ್ಯೆ ಜಯಾಗೆ ಖಡಕ್ ಎಚ್ಚರಿಕೆ ನೀಡಿದರು.

ಆ.20ರಂದು ವಿದ್ಯಾಲಯ ಆವರಣದಲ್ಲಿ ಕಾಲೇಜು ವಿದ್ಯಾರ್ಥಿಗಳು ಹೈಸ್ಕೂಲ್ ವಿದ್ಯಾರ್ಥಿಗಳ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ಕಟ್ಟಿಗೆ, ಬೆಲ್ಟ್ ಹಾಗೂ ಪೈಪ್‌ನಿಂದ ಹೊಡೆದಿದ್ದಾರೆ. ಹಲ್ಲೆಗೊಳಗಾದ ವಿದ್ಯಾರ್ಥಿಗಳು ಭೀತಿಯಲ್ಲಿದ್ದಾರೆ. ಇಷ್ಟೆಲ್ಲಾ ಆದರೂ ಅಲ್ಲಿನ ಪ್ರಾಚಾರ್ಯೆ, ಶಿಕ್ಷಕರು, ಸಿಬ್ಬಂದಿ ನಮ್ಮ ಗಮನಕ್ಕೆ ತಂದಿಲ್ಲ. ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಪಾಲಕರು ಸಂಸದ ಕೆ.ರಾಜಶೇಖರ ಹಿಟ್ನಾಳ ಒತ್ತಾಯಿಸಿದರು.

ಪಾಲಕರಾದ ಕುಬೇರ ಮಜ್ಜಿಗಿ, ಶಿವಾನಂದ ಪ್ಯಾಟಿ, ಬಸವರಾಜ ಹುಬ್ಬಳ್ಳಿ, ಜಗನ್ನಾಥ ಬಿಸರಳ್ಳಿ, ಹನುಮಂತಪ್ಪ ಹಳ್ಳಿ, ಯಲ್ಲಪ್ಪ ರಕ್ಕಸಗಿ, ಟಿ.ಎನ್.ಚವ್ಹಾಣ್, ಗಂಗಾಧರ ಡೊಳ್ಳಿನ, ರಂಗನಾಥ ಮೇಟಿ, ನಾಗರಾಜ ಹೊನಗಡ್ಡ, ದ್ಯಾಮಣ್ಣ ವಡ್ರಕಲ್, ಮಲ್ಲಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net