ಅಜ್ಜನ ಕೈ ಹಿಡಿದು ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ವಾಹನ ಡಿಕ್ಕಿ: ಸ್ಥಳದಲ್ಲೇ ಬಾಲಕಿ ಸಾವು

23092022 kukanur student death
??????????
Published on

ಕುಕನೂರು: ತಾಲೂಕಿನ ಶಿರೂರು ಗ್ರಾಮದಲ್ಲಿ ಶುಕ್ರವಾರ ಟಾಟಾ ಏಸ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಸುಮಯಾ (9) ಮೃತೆ. ಚಾಲಕ ಅರಕೇರಿ ಗ್ರಾಮದ ವೀರೇಶ ನಿರಳ್ಳಿಯನ್ನು ಬಂಧಿಸಲಾಗಿದೆ. ಸರ್ಕಾರಿ ಕಿರಿಯ ಶಾಲೆಯಲ್ಲಿ ಮೂರನೇ ತರಗತಿ ಓದುತ್ತಿದ್ದು, ಶುಕ್ರವಾರ ಸುಮಯಾಳನ್ನು ಅವರ ಅಜ್ಜ ಶಾಲೆಗೆ ಕರೆದುಕೊಂಡು ಹೋಗುವಾಗ ಅಪಘಾತವಾಗಿದೆ. ವಾಹನ ಮಂಗಳೂರಿಗೆ ಹೋಗುತ್ತಿತ್ತು. ಈ ಕುರಿತು ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿ ಪಾಲಕರ ಆಕ್ರಂದನ ಮುಗಿಲುಮುಟ್ಟಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net