ಕುಕ್ಕರಹಳ್ಳಿ ಪ್ರೌಢಶಾಲೆ ಮಕ್ಕಳು ಜಿಲ್ಲಾ ಮಟ್ಟಕ್ಕೆ

34
Published on

ಮೈಸೂರು: ಬಸವ ಮಾರ್ಗ ಸಂಸ್ಥೆ ದತ್ತು ಪಡೆದ ಕುಕ್ಕರಹಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ದಕ್ಷಿಣ ವಲಯ ವತಿಯಿಂದ ಇತ್ತೀಚೆಗೆ ತಾಲೂಕು ಮಟ್ಟದ ವಾಲಿಬಾಲ್ ಕ್ರೀಡಾಕೂಟವನ್ನು ಮಹರ್ಷಿಶಾಲೆಯಲ್ಲಿ ಆಯೋಜಿಸಲಾಗಿತ್ತು.
ಫೈನಲ್ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಕುಕ್ಕರಹಳ್ಳಿ ಶಾಲೆಯ ವಿದ್ಯಾರ್ಥಿಗಳು ವಿಜಯ ವಿಠಲಶಾಲೆಯ ವಿರುದ್ಧ ಜಯಗಳಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡರು. ಅದೇ ರೀತಿ ಸೇಂಟ್ ಥಾಮಸ್ ಶಾಲೆಯಲ್ಲಿ ನಡೆದ ಅಂತರ ಪ್ರೌಢಶಾಲಾ ವಾಲಿಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿಯಲ್ಲಿ ಇದೇ ಶಾಲೆಯ ವಿದ್ಯಾರ್ಥಿಗಳು ಮೂರನೇ ಸ್ಥಾನ ಪಡೆದರು.
ಬಸವ ಮಾರ್ಗ ಸಂಸ್ಥೆಯ ಸಂಸ್ಥಾಪಕ ಬಸವಣ್ಣ, ಶಾಲೆಯ ಮುಖ್ಯ ಶಿಕ್ಷಕ ಆರ್.ಚಂದ್ರಾ, ದೈಹಿಕ ಶಿಕ್ಷಣ ಶಿಕ್ಷಿಕಿ ಜಿ.ಸಾವಿತ್ರಿ, ಸಹಶಿಕ್ಷಕಿ ಬಿ.ಆರ್.ವಾಣಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net