ಡಿ.1ರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳ ಜಾತ್ರೋತ್ಸವ

kukke new
Published on

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.1ರಿಂದ 15ರವರೆಗೆ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನೆರವೇರಲಿದೆ.

ನ.30ರಂದು ಮೂಲ ಮೃತ್ತಿಕಾ ಪ್ರಸಾದ ತೆಗೆಯಲಾಗುವುದು. ಡಿ.1ರಂದು ಕೊಪ್ಪರಿಗೆ ಏರುವುದರ ಮೂಲಕ ಜಾತ್ರೆ ಆರಂಭವಾಗಲಿದೆ. ಅದೇ ದಿನ ರಾತ್ರಿ ಮತ್ತು ಮರುದಿನ ಶೇಷ ವಾಹನಯುಕ್ತ ಬಂಡಿ ಉತ್ಸವ, 3ರಂದು ಲಕ್ಷದೀಪೋತ್ಸವ, 4ರಂದು ಶೇಷವಾಹನೋತ್ಸವ, 5ರಂದು ಅಶ್ವವಾಹನೋತ್ಸವ, 6ರಂದು ಮಯೂರ ವಾಹನೋತ್ಸವ, 7ರಂದು ಚೌತಿ ಹೂವಿನ ತೇರಿನ ಉತ್ಸವ, 8ರಂದು ಮಾರ್ಗಶಿರ ಶುದ್ಧ ಪಂಚಮಿ ದಿನ ತೈಲಾಭ್ಯಂಜನ, ರಾತ್ರಿ ಪಂಚಮಿ ರಥೋತ್ಸವ ನೆರವೇರಲಿದೆ.

9ರಂದು ಮಾರ್ಗಶಿರ ಶುದ್ಧ ಷಷ್ಠಿಯಂದು ಚಂಪಾಷಷ್ಠಿ ಮಹಾರಥೋತ್ಸವ, 10ರಂದು ಅವಭೃತೋತ್ಸವ ಮತ್ತು ನೌಕಾವಿಹಾರ, 15ರಂದು ಕೊಪ್ಪರಿಗೆ ಇಳಿಯುವ ಮೂಲಕ ಜಾತ್ರೋತ್ಸವ ಸಮಾಪನಗೊಳ್ಳಲಿದೆ. ಈ ದಿನ ರಾತ್ರಿ ನೀರಿನಲ್ಲಿ ಬಂಡಿ ಉತ್ಸವ ನೆರವೇರಲಿದ್ದು, ಪುರುಷರಾಯ, ಹೊಸಳಿಗಮ್ಮ ಹಾಗೂ ಪರಿವಾರ ದೈವಗಳ ನಡಾವಳಿ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net