ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸಹಕಾರ ಸಚಿವರಿಂದ ಆಶ್ಲೇಷ ಬಲಿ ಸೇವೆ

IMG-20220723-WA0032
Published on

ಮಂಗಳೂರು: ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶನಿವಾರ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ನೀಡಿ ಆಶ್ಲೇಷ ಬಲಿ ಸೇವೆ ನೆರವೇರಿಸಿದರು.

ಬಳಿಕ ಶ್ರೀ ದೇವರ ದರುಶನ ಪಡೆದ ಸಚಿವರಿಗೆ ದೇವಳದ ಅರ್ಚಕರಾದ ಸತ್ಯನಾರಾಯಣ ನೂರಿತ್ತಾಯರು ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.ನಂತರ ಆದಿಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದು ಮೃತ್ತಿಕಾ ಪ್ರಸಾದ ಪಡೆದರು.ನಂತರ ದೇವಳದಲ್ಲಿ ಉಪಹಾರ ಸ್ವೀಕರಿಸಿದರು

.
ನಂತರ ದೇವಳದ ಆಡಳಿತ ಕಚೇರಿಗೆ ಆಗಮಿಸಿದ ಸಚಿವರನ್ನು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ವನಜಾ.ವಿ.ಭಟ್, ಮಾಜಿ ಸದಸ್ಯ ಕಿಶೋರ್ ಶಿರಾಡಿ, ಶಿಷ್ಠಾಚಾರ ಅಧಿಕಾರಿ ಜಯರಾಮ ರಾವ್, ಶಿಷ್ಠಾಚಾರ ವಿಭಾಗದ ಹರೀಶ್ ಉಪಸ್ಥಿತರಿದ್ದರು.


ಶುಕ್ರವಾರ ರಾತ್ರಿ ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಸಚಿವರು ಪ್ರಸಾದ ಬೋಜನ ಸ್ವೀಕರಿಸಿದರು.ಶನಿವಾರ ಶ್ರೀ ದೇವರ ದರುಶನ ಪಡೆದು ಸೇವೆ ನೆರವೇರಿಸಿದ ನಂತರ ಗುತ್ತಿಗಾರಿಗೆ ಪಯಣ ಬೆಳೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net