

ಕುಕನೂರು: ಭಾನಾಪುರ, ಇಟಗಿ, ತಳಕಲ್ ಗ್ರಾಮದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ.
ಸಿಎಂ ಅವರ ವಿಶೇಷ ಅನುದಾನದಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿವಿಧ ಸಮುದಾಯಗಳ ಅಭಿವೃದ್ಧಿ ಕಾರ್ಯಕ್ರಮದಡಿ ಕುಕನೂರು ತಾಲೂಕಿನ ಇಟಗಿ ಗ್ರಾಮದಲ್ಲಿ 6 ಕೋಟಿ ರೂ., ತಳಕಲ್ ಗ್ರಾಮದಲ್ಲಿ 4 ಕೋಟಿ ರೂ., ಭಾನಾಪುರ ಗ್ರಾಮದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಬುದ್ಧ ಬಸವ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣವಾಗಲಿದೆ.
ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರು ಬುದ್ಧ, ಬಸವ, ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುದಾನ ಮಂಜೂರು ಮಾಡಿಸಿದ್ದಾರೆ. ಭವನ ನಿರ್ಮಾಣ ಆದರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಬಡವರ್ಗ ಖಾಸಗಿ ಕಲ್ಯಾಣ ಮಂಟಪಗಳಿಗೆ ಲಕ್ಷಾಂತರ ರೂ.ಹಣ ವ್ಯಯಿಸಿ ಸಮಾರಂಭ ಮಾಡುವುದು ತಪ್ಪಲಿದೆ.