ರಾಜ್ಯ ಸರ್ಕಾರದಿಂದ ಹಗಲು ದರೋಡೆ

Alavandi bjp day
ಕುಕನೂರು ತಾಲೂಕಿನ ಮಸಬಹಂಚಿನಾಳ ಗ್ರಾಮದ ಬಿಜೆಪಿ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಸಂಘಟನಾ ಪರ್ವ ಮಂಡಲದ ಕಾರ್ಯಾಗಾರದಲ್ಲಿ ಮಾಜಿ ಸಚಿವ ಹಾಲಪ್ಪ ಆಚಾರ್, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಕುಮಾರ ಗುಳಗಣ್ಣವರ್, ಬಿಜೆಪಿ ತಾಲೂಕಾಧ್ಯಕ್ಷ ಮಾರುತಿ ಗಾವರಾಳ, ಪ್ರಮುಖರಾದ ಬಸಲಿಂಗಪ್ಪ ಭೂತೆ, ಸಿ.ಎಚ್.ಪೊಲೀಸ ಪಾಟೀಲ್, ವೀರಣ್ಣ ಹುಬ್ಬಳ್ಳಿ ಇದ್ದರು.
Published on

ಕುಕನೂರು : ತಾಲೂಕಿನಲ್ಲಿ ಹಿಂದು ಸಮಾಜದ ದೇವಸ್ಥಾನದ ಆಸ್ತಿಯನ್ನು ಅಭಿವೃದ್ಧಿ ವಿಷಯದಲ್ಲಿ ಲೂಟಿ ಮಾಡುವುದು ಖಂಡನಿಯ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಹೇಳಿದರು.

ತಾಲೂಕಿನ ಮಸಬಹಂಚಿನಾಳ ಗ್ರಾಮದ ಬಿಜೆಪಿ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಸಂಘಟನಾ ಪರ್ವ ಮಂಡಲದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಶನಿವಾರ ಮಾತನಾಡಿದರು. ಕರ್ನಾಟಕದಲ್ಲಿ ಹಗಲು ದರೋಡೆ ಮಾಡುತ್ತಿರುವುದು ಸಿದ್ದರಾಮಯ್ಯ ಅವರ ಸರ್ಕಾರ ಎಂದು ಟೀಕಿಸಿದರು.

ವಿಶ್ವದಲ್ಲಿಯೇ ಅತ್ತ್ಯುತ್ತಮ ಪಕ್ಷ ಎಂದರೆ ಬಿಜೆಪಿ. ಈಗಾಗಲೇ ಯಲಬುರ್ಗಾದಲ್ಲಿ 33 ಸಾವಿರ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಂಡಿದ್ದಾರೆ. ಇದು ಜಿಲ್ಲೆಯಲ್ಲಿ ಕ್ಷೇತ್ರ ಪ್ರಥಮವಾಗಿದೆ. ಮುಂದಿನ ದಿನದಲ್ಲಿ 7 ಸಾವಿರ ಪ್ರಾಥಮಿಕ ಸದಸ್ಯತ್ವವನ್ನು ಮಾಡಿಸಲಾಗುವುದು. ಇದಕ್ಕೆ ಎಲ್ಲ ಕಾರ್ಯಕರ್ತರು ಸಹಕಾರ ಅಗತ್ಯ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಕುಮಾರ ಗುಳಗಣ್ಣವರ್ ಮಾತನಾಡಿ, ಜಿಲ್ಲೆಯಲ್ಲಿ 1.32 ಲಕ್ಷ ಜನ ಭಾಜಪ ಸದಸ್ಯತ್ವವನ್ನು ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ಅತಿ ಹೆಚ್ಚು ಸದಸ್ಯತ್ವ ಹೊಂದಿದ ಜಿಲ್ಲೆಯಾಗಿದೆ ಎಂದರು.

ಬಿಜೆಪಿ ತಾಲೂಕಾಧ್ಯಕ್ಷ ಮಾರುತಿ ಗಾವರಾಳ, ಪ್ರಮುಖರಾದ ಬಸಲಿಂಗಪ್ಪ ಭೂತೆ, ಸಿ.ಎಚ್.ಪೊಲೀಸ ಪಾಟೀಲ್, ವೀರಣ್ಣ ಹುಬ್ಬಳ್ಳಿ, ಸಿದ್ದು ಮಣ್ಣಿನವರು, ಶರಣಪ್ಪ ಬಣ್ಣದಬಾವಿ, ಅಂದಯ್ಯ, ನರಸಿಂಗರಾವ್ ಕುಲಕರ್ಣಿ, ಕೆ.ಮಹೇಶ್, ಶಿವಲೀಲಾ ದಳವಾಯಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net