ಮಹಾಮಾಯಾ ರಥೋತ್ಸವ ಅದ್ದೂರಿ

KKNR-05
ಕುಕನೂರು ಪಟ್ಟಣದ ಐತಿಹಾಸಿಕ ಪ್ರಸಿದ್ಧ ಶ್ರೀ ಮಹಾಮಾಯ ದೇವಿ ಜಾತ್ರೋತ್ಸವದ ನಿಮಿತ್ತ ಬುಧವಾರ ಭಕ್ತಾಧಿಗಳ ಮಧ್ಯೆ ರಥೋತ್ಸವ ನೆರವೇರಿತು.
Published on

ಕುಕನೂರು: ಪಟ್ಟಣದ ಐತಿಹಾಸಿಕ ಪ್ರಸಿದ್ಧ ಮಹಾಮಾಯ ದೇವಿ ಜಾತ್ರಾ ಮಹೋತ್ಸವ ನಿಮಿತ್ತ ಮಹಾರಥೋತ್ಸವ ಸಾವಿರಾರು ಭಕ್ತರ ಜಯಘೋಷದೊಂದಿಗೆ ಅದ್ದೂರಿಯಾಗಿ ಬುಧವಾರ ನೆರವೇರಿತು.

ಜಾತ್ರೋತ್ಸವಕ್ಕೆ ಗದಗ, ಹುಬ್ಬಳ್ಳಿ-ಧಾರವಾಡ, ಹಾವೇರಿ, ಶಿಗ್ಗಾಂವಿ, ಹೂವಿನಹಡಗಲಿ, ದಾವಣಗೆರೆ, ಬೆಂಗಳೂರು, ರಾಯಚೂರ, ಹಳ್ಯಾಳ ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸಿ ದೇವಿ ದರ್ಶನ ಪಡೆದು, ರಥೋತ್ಸವದಲ್ಲಿ ಪಾಲ್ಗೊಂಡು ಉತ್ತತ್ತಿ, ಬಾಳೆಹಣ್ಣು ಸಮರ್ಪಿಸಿ ಭಕ್ತಿ ಮೆರೆದರು.

ಇದಕ್ಕೂ ಮೊದಲು ಬೆಳ್ಳಿ ಪಲ್ಲಕ್ಕಿಯಲ್ಲಿ ಮಹಾಮಾಯ ದೇವಿಯ ಮೂರ್ತಿ ಮೆರವಣಿಗೆ ಉತ್ಸವಗಳು ಜರುಗಿದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net