ಮಕ್ಕಳ ಉನ್ನತ ಶಿಕ್ಷಣಕ್ಕೆ ಆದ್ಯತೆ ನೀಡಲಿ

talent award
ಕುಕನೂರು ತಾಲೂಕಿನ ಇಟಗಿ ಗ್ರಾಮದಲ್ಲಿ ಭಗೀರಥ ಮಹರ್ಷಿ ಜಯಂತಿ ನಿಮಿತ್ತ ಭವ್ಯ ಮೆರವಣಿಗೆ ಅದ್ದೂರಿಯಾಗಿ ಜರುಗಿತು.
Published on

ಕುಕನೂರು: ಯುವ ಪೀಳಿಗೆ ಗುರಿ ಸಾಧನೆಗಾಗಿ ಅಚಲ ನಿರ್ಧಾರ ಕೈಗೊಳ್ಳಬೇಕು ಎಸಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಹೇಳಿದರು.

ತಾಲೂಕಿನ ಇಟಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶ್ರೀ ಭಗೀರಥ ಮಹರ್ಷಿ ಯುವಕ ಸಂಘದಿಂದ ರಾಜಋಷಿ ಶ್ರೀ ಭಗೀರಥ ಮಹರ್ಷಿ ಜಯಂತಿ ಹಾಗೂ 2024 -25ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.85ಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಭಗೀರಥ ಸಮಾಜದ ನಿವೃತ್ತ ಸರ್ಕಾರಿ ನೌಕರರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದರು. ಶೈಕ್ಷಣಿಕವಾಗಿ ಹಿಂದುಳಿದಿರುವ ಉಪ್ಪಾರ ಸಮುದಾಯ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದರು.

ಪ್ರಮುಖರಾದ ಮುತ್ತಯ್ಯ ಕಳ್ಳಿಮಠ, ರತ್ನವ್ವ ಹಂಚಾಳಪ್ಪ ಭಜಂತ್ರಿ, ಶಿವಕುಮಾರ ಗುಳಗಣ್ಣನವರ್, ಬಸವಪ್ರಭು ಪಾಟೀಲ್, ಬಸವರಾಜ ಹೊಂಬಾಳ, ರಾಜಶೇಖರ ಹೊಂಬಾಳ, ಶರಣಪ್ಪ ದೇವರಮನಿ ಇತರರಿದ್ದರು. ಇದಕ್ಕೂ ಮೊದಲು ಗ್ರಾಮದ ಪ್ರಮುಖ ಬೀದಿಗಳಲ್ಲಿ ಕುಂಭ, ಕಳಶದೊಂದಿಗೆ ಭಗೀರಥ ಮಹರ್ಷಿ ಭಾವಚಿತ್ರ ಮೆರವಣಿಗೆ ನಡೆಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net