

ರಾಯಚೂರು: ದೇವದುರ್ಗದ ಲಕ್ಷ್ಮೀ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಡಿ.20ರಂದು ಬೆಳಗ್ಗೆ 11ಕ್ಕೆ ಕುಳುವ ಸಮಾಜದ ಜಾಗೃತಿ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಕುಳುವ ಮಹಾಸಂಘದ ಗೌರವಾಧ್ಯಕ್ಷ ಈರಣ್ಣ ಸಾತ್ಪಡೆ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದರು. ಅಂದು ಬೆಳಗ್ಗೆ 8ಕ್ಕೆ ಅಂಬೇಡ್ಕರ್ ವೃತ್ತದಿಂದ ಕಲ್ಯಾಣ ಮಂಟಪದವರೆಗೆ ನುಲಿಯ ಚಂದಯ್ಯ ಭಾವಚಿತ್ರ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚಿನ ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದರು.
ಇರಕಲ್‌ಮಠದ ಬಸವಪ್ರಸಾದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಕೆ.ಶಿವನಗೌಡ ನಾಯಕ ಮೆರವಣಿಗೆ ಉದ್ಘಾಟಿಸಲಿದ್ದಾರೆ ಎಂದು ಈರಣ್ಣ ಸಾತ್ಪಡೆ ತಿಳಿಸಿದರು. ಪದಾಧಿಕಾರಿಗಳಾದ ನರಸಿಂಹಲು ಕಮಲಾಪುರ, ಆಂಜನೇಯ, ಮಾಲಾ ಭಜಂತ್ರಿ, ಗಣೇಶ, ಬೂದೆಪ್ಪ ಸಾತ್ಪಡಿ ಉಪಸ್ಥಿತರಿದ್ದರು.