ಮನೆಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

3-RNR-04
Published on

ರಾಣೆಬೆನ್ನೂರ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ತಾಲೂಕಿನ ಕುಮಾರಪಟ್ಟಣ ಠಾಣೆ ಪೊಲೀಸರು ಅವರಿಂದ 2.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡ ಘಟನೆ ಬುಧವಾರ ನಡೆದಿದೆ.
ತಾಲೂಕಿನ ಕರೂರ ಗ್ರಾಮದ ಸಂತೋಷಕುಮಾರ ಹನುಮಂತಪ್ಪ ಹೂಲಿ (34), ಬಸವರಾಜ ಕೆಂಚ್ಚಪ್ಪ ಕೊರವರ (38) ಬಂಧಿತ ಆರೋಪಿಗಳು.
ಇವರು ಕರೂರ ಗ್ರಾಮದ ಮಾಲತೇಶ ಕಡತಿ ಎಂಬುವರ ಮನೆಯ ಬೀಗ ಮುರಿದು ಚಿನ್ನಾಭರಣ ದೋಚಿದ್ದರು. ಈ ಕುರಿತು ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ಅವರಿಂದ 2.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಈ ಕುರಿತು ಕುಮಾರಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net