

ಮಡಿಕೇರಿ: ಕೇಂದ್ರದ ಬೃಹತ್ ಕೈಗಾರಿಕಾ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕೊಡಗಿನ ಜೆಡಿಎಸ್ ಮುಖಂಡರು ಬೆಂಗಳೂರಿನಲ್ಲಿ ಇತ್ತೀಚೆಗೆ ಭೇಟಿಯಾದರು.
ಯುವ ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಕೆ.ಜಿ.ಜಾಶಿರ್ ಮೂರ್ನಾಡು, ಪ್ರಮುಖರಾದ ಶಿವದಾಸ್, ಶರತ್ ಮತ್ತಿತರರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಕೊಡಗು ಜಿಲ್ಲೆಗೆ ಭೇಟಿ ಮಾಡುವಂತೆ ಮನವಿ ಮಾಡಿದರು.
ಸಧ್ಯದಲ್ಲೇ ಜಿಲ್ಲೆಗೆ ಭೇಟಿ ನೀಡಿ, ಕಾರ್ಯಕರ್ತರ ಸಭೆ ನಡೆಸಿ ಪಕ್ಷ ಸಂಘಟಿಸುವ ಕುರಿತು ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ. ಅಲ್ಲದೆ ನಿಷ್ಠಾವಂತ ಕಾರ್ಯಕರ್ತರಿಗೆ ಮುಂದಿನ ಜಿ.ಪಂ ಮತ್ತು ತಾ.ಪಂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಾಗಿ ತಿಳಿಸಿದ್ದಾರೆ ಎಂದು ವಿಶ್ವ ಹಾಗೂ ಜಾಶಿರ್ ಹೇಳಿದರು.