

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ನೀಡಬೇಕು ಎಂಬುದು ನನ್ನ ಅಭಿಪ್ರಾಯ. ಹಾಗಾಗಿ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಕುಟುಂಬ ತ್ಯಾಗ ಮಾಡಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಮೈತ್ರಿಯಿಂದ ಜೆಡಿಎಸ್ ಹಾಗೂ ಬಿಜೆಪಿ ಎರಡು ಪಕ್ಷಗಳಿಗೂ ಅನುಕೂಲವಾಗಿದೆ. ರಾಜ್ಯದಲ್ಲಿ ಜೆಡಿಎಸ್ ಪುನರ್ ಜನ್ಮ ಪಡೆದಿದೆ ಎಂದರು.
ಶಿಗ್ಗಾಂವ ಸವಣೂರು ವಿಧಾನಸಭೆ ಉಪ ಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಪುತ್ರನಿಗೆ ಟಿಕೆಟ್ ಕೇಳಿದರೆ ತಪ್ಪೇನಿಲ್ಲ. ಬಿಜೆಪಿಯಲ್ಲಿ ನಂ. 1 ಸ್ಥಾನದಲ್ಲಿ ಇರುವವರು ಕುಟುಂಬ ರಾಜರಾರಣ ಮಾಡಿದ್ದಾರೆ. ಬೊಮ್ಮಾಯಿ ಅವರನ್ನು ಯಾಕೆ ಬಲಿಪಶು ಮಾಡುತ್ತೀರಿ ಎಂದರು.
ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿರುವುದು ದುರಂತ. ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದಿದ್ದೇ ಆದಲ್ಲಿ ಪೋಲಿಸ್ ಠಾಣೆಗೆ ಬೆಂಕಿ ಹಚ್ಚಲು ಮುಂದಾದವರನ್ನು, ಮಹಿಳಾ ಪೊಲೀಸ್ ಜತೆ ಅಸಭ್ಯವಾಗಿ ನಡೆದುಕೊಂಡವರನ್ನು ಅಮಾಯಕರು ಎಂದು ಒಪ್ಪಿಕೊಳ್ಳಲು ಹೇಗೆ ಸಾಧ್ಯ? ಹೀಗೆ ಸರ್ಕಾರದ ನಿರ್ಧಾರದಿಂದ ಪೊಲೀಸ್ರಿಗೆ ಪ್ರಮಾಣಿಕವಾಗಿ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಮಾಜದ ವಿಶ್ವಾಸ ಕಳೆದುಕೊಂಡಿದ್ದು, ಅಹಿಂದ ಮತ ಬ್ಯಾಂಕ್ಗಾಗಿ ಇಂಥ ನಿರ್ಧಾರ ಕೈಗೊಂಡಿದ್ದಾರೆ ಎಂದರು.
ಹಳೇ ಹುಬ್ಬಳ್ಳಿ ಪ್ರಕರಣವನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡ ಬಳಿಕ ಕೆಜೆ ಹಳ್ಳಿ, ಡಿಜೆ ಹಳ್ಳಿ ಘಟನೆಯ ಆರೋಪಿಗಳು ತಮ್ಮ ಮೇಲಿನ ಪ್ರಕರಣವನ್ನು ವಾಪಸ್ ಪಡೆಯುವಂತೆ ಕೇಳುತ್ತಿದ್ದಾರೆ. ಬಿಜೆಪಿ ಕಾಲದಲ್ಲಿ ಅಮಾಯಕ ರೈತರ ಮೇಲಿನ ಪ್ರಕರಣಗಳನ್ನು ಮಾತ್ರ ವಾಪಸ್ ಪಡೆಯಲಾಗಿದೆ ಎಂದರು.
ವಿಜಯಪುರದಲ್ಲೇ 16ಸಾವಿರ ಎಕರೆ ವಕ್ಪ್ ಆಸ್ತಿ ಇದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳುತ್ತಾರೆ. ರಾಜ್ಯದಲ್ಲಿ ಒಟ್ಟು 6.5 ಲಕ್ಷ ಎಕರೆ ವಕ್ಪ್ ಆಸ್ತಿ ಇದೆ ಎಂದು ಮುಸ್ಲಿಮ್ು ಕ್ಲೇಮ್ ಮಾಡುತ್ತಿದ್ದಾರೆ. ದೆಹಲಿಯ ಹೊಸ ಸಂಸತ್ ಭವನದ ಜಾಗ ಸಹ ತಮ್ಮದು ಎಂದು ಹೇಳಿದ್ದಾರೆ. ಜಮೀರ್ ಅಹ್ಮದ್ ಖಾನ್ ಪೂರ್ವರು ಟಿಪ್ಪು, ಮೊಗಲರ ಕಾಲದಲ್ಲಿ ಮತಾಂತರಗೊಂಡವರು. ಈ ಮಕ್ಕಳಿಗೆ ಈ ದೇಶದ ಮೇಲೆ ಯಾವುದೇ ಅಧಿಕಾರ ಇಲ್ಲ ಎಂದು ಹೇಳಿದರು.