

ಕುಮಟಾ: ಇಲ್ಲಿನ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕೆ ಬುಧವಾರ ನಡೆಯಬೇಕಿದ್ದ ಚುನಾವಣೆ ಪ್ರಕ್ರಿಯೆಗೆ ಹೈಕೋರ್ಟ್ ತಡೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಚುನಾವಣೆ ಪ್ರಕ್ರಿಯೆ ನಡೆಸದಿರಲು ಆದೇಶಿಸಿದ್ದಾರೆ.
ಈ ಕುರಿತು ವಿರೋಧ ವ್ಯಕ್ತಪಡಿಸಿ ದ ಶಾಸಕ ದಿನಕರ ಶೆಟ್ಟಿ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಸ್ಟೇ ಆದೇಶ ಅಧಿಕೃತವಾಗಿ ಬರುವವರೆಗೆ ಚುನಾವಣೆ ಪ್ರಕ್ರಿಯೆ ಮುಂದುವರಿಸುವಂತೆ ಪಟ್ಟು ಹಿಡಿದರು. ಪುರಸಭೆ ಮೀಟಿಂಗ್ ಹಾಲ್ ನಲ್ಲಿ ಬಿಜೆಪಿ ಸದಸ್ಯರು ಅಧಿಕಾರಿಗಳ ನಡೆ ವಿರುದ್ಧ ವಾಗ್ದಾಳಿ ನಡೆಸಿದ್ದು, ಶಾಸಕ ದಿನಕರ ಶೆಟ್ಟಿ ಸಾತ್ ನೀಡಿದ್ದಾರೆ.