

ಕುಮಟಾ: ಕಾರು ಡಿಕ್ಕಿ ಹೊಡೆದಿದ್ದರಿಂದ ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಧಾರೇಶ್ವರ ನಾಗತೀರ್ಥ ಸಮೀಪ ಶನಿವಾರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ಸಂಭವಿಸಿದೆ. ಧಾರೇಶ್ವರದ ನಿವಾಸಿ ಗೌರಿ ಶ್ರೀಧರ ನಾಯ್ಕ (48) ಮೃತಪಟ್ಟ ಮಹಿಳೆ. ಮೃತಳು ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಳು ಎನ್ನಲಾಗಿದೆ. ಗೌರಿ ರಸ್ತೆ ದಾಟುವ ಸಂದರ್ಭದಲ್ಲಿ ಕುಮಟಾದಿಂದ ಹೊನ್ನಾವರ ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಕಾರನ್ನು ಅಮೃತಾ ಎಂಬುವರು ಚಲಾಯಿಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.