ತ್ಯಾಗರಾಜನಗರದ ಶ್ರೀ ಸಾಯಿ ದೇವಸ್ಥಾನದಲ್ಲಿ ಮಹಾ ಕುಂಭಾಭಿಷೇಕ

New Project (8)
Published on

ಬೆಂಗಳೂರು: ತ್ಯಾಗರಾಜನಗರದಲ್ಲಿರುವ ಶ್ರೀ ಸಾಯಿ ಆಧ್ಯಾತ್ಮಿಕ ಕೇಂದ್ರದಲ್ಲಿ ಭಾನುವಾರ (ಮೇ 26) ಮಹಾ ಕುಂಭಾಭಿಷೇಕ ನಡೆಯಲಿದೆ. ದೇವಸ್ಥಾನದ ಆವರಣದಲ್ಲಿ ಆಯೋಜನೆಗೊಳ್ಳಲಿರುವ ಕಾರ್ಯಕ್ರಮದಲ್ಲಿ ಶೃಂಗೇರಿ, ಕಾಲಾಡಿ ಹಾಗೂ ಕುಂಭಕೋಣಂನಿಂದ 70 ಮಂದಿ ಆರ್ಚಕರು ಆಗಮಿಸಿದ್ದಾರೆ. ಬೆಳಗ್ಗೆ 8.30ಕ್ಕೆ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಹೋಮ ಪ್ರಾರಂಭವಾಗಲಿದ್ದು, ಬೆಳಗ್ಗೆ 10.30ಕ್ಕೆ ಜರುಗಲಿರುವ ಶ್ರೀ ಸಾಯಿ ಕುಂಭಾಭಿಷೇಕಕ್ಕೆ ಸಾವಿರಾರು ಮಂದಿ ಸಾಕ್ಷಿಯಾಗಲಿದ್ದಾರೆ. ಕೇಂದ್ರವು ಸ್ಥಾಪನೆಯಾಗಿ 70 ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ನಾಡಿನ ಕಲ್ಯಾಣಕ್ಕಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ 6 ದಿನಗಳ ಕಾಲ ವಿಶೇಷ ಪೂಜೆ, ಹೋಮ, ಹವನ ಮತ್ತು ಅನೇಕ ಧಾರ್ಮಿಕ ಕಾರ್ಯಗಳನ್ನು ಆಯೋಜಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net