ಕುಂದಗೋಳ ತಾಲೂಕಾಸ್ಪತ್ರೆ ಅವ್ಯವಸ್ಥೆ ಪರಿಶೀಲನೆ

KND TALIKASPATRE
Published on

ಕುಂದಗೋಳ: ಪಟ್ಟಣದ ತಾಲೂಕು ಆಸ್ಪತ್ರೆ ಹಾಗೂ ಪೊಲೀಸ್ ಠಾಣೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ, ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ಎಫ್. ದೊಡ್ಡಮನಿ ಇತ್ತೀಚೆಗೆ ಅನಿರೀಕ್ಷಿತ ಭೇಟಿ ನೀಡಿ, ಅಲ್ಲಿನ ಕುಂದುಕೊರತೆ ಪರಿಶೀಲಿಸಿದರು.

ಕಾನೂನು ನೆರವು ಕಾರ್ಯಕ್ರಮದ ಬಳಿಕ ನೇರವಾಗಿ ಆಸ್ಪತ್ರೆಗೆ ತೆರಳಿದ ಅವರು, ರೋಗಿಗಳಿಂದ ಚಿಕಿತ್ಸಾ ವ್ಯವಸ್ಥೆ ಕುರಿತು ಮಾಹಿತಿ ಪಡೆದರು. ಸ್ತ್ರೀರೋಗ ತಜ್ಞೆ ಡಾ. ಶಾರದಾ ಕಮತರ ಅವರು ಒಂಬತ್ತು ತಿಂಗಳ ಅನಧಿಕೃತ ಗೈರಿನಿಂದ ಗರ್ಭಿಣಿಯರು ಹಾಗೂ ಮಹಿಳಾ ರೋಗಿಗಳಿಗೆ ಆಗುತ್ತಿರುವ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಿದರು.

ಅಲ್ಲದೆ, ಈ ಕುರಿತು ಜಿಲ್ಲಾ ಆರೋಗ್ಯಾಧಿಕಾರಿಗಳಿಂದ (ಡಿಎಚ್​ಒ) ಸ್ಪಷ್ಟನೆ ಪಡೆಯುವುದಾಗಿ ಹೇಳಿದರು. ಬಳಿಕ ತುರ್ತು ಚಿಕಿತ್ಸಾ ಘಟಕ, ವಾರ್ಡ್ ಗಳನ್ನು ಪರಿಶೀಲಿಸಿ, ಸ್ಥಳದಲ್ಲಿದ್ದ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸಲು ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಂತರ ಪೊಲೀಸ್ ಠಾಣೆಗೆ ಭೇಟಿ ನೀಡಿ, ಪ್ರಕರಣಗಳ ವಿಲೇವಾರಿ ಕುರಿತು ಮಾಹಿತಿ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net