ಪ್ರತಿಪಕ್ಷಗಳಿಗೆ ತಕ್ಕ ಉತ್ತರ

kundana gruhalkshmi program
Published on

ವಿಜಯವಾಣಿ ಸುದ್ದಿಜಾಲ ಕುಂದಾಣ
ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಸರ್ಕಾರ ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದಿದೆ ಎಂದು ಜಾಲಿಗೆ ಗ್ರಾಪಂ ಅಧ್ಯಕ್ಷ ಸಿಂಗ್ರಹಳ್ಳಿ ಆನಂದ್ ಹೇಳಿದರು.
ಹೋಬಳಿಯ ಜಾಲಿಗೆ ಗ್ರಾಪಂ ಕಚೇರಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿ ಮಾತನಾಡಿ,ವಿಧಾನಸಭೆ ಚುನಾವಣೆಯಲ್ಲಿ ಪ್ರತಿ ಪಕ್ಷಗಳು ಕಾಂಗ್ರೆಸ್ ಗ್ಯಾರಂಟಿ ಯೋಜನೆ ಬಗ್ಗೆ ಅಪಹಾಸ್ಯ ಮಾಡಿದ್ದವು. ಆದರೆ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಂಡು ಪ್ರತಿಪಕ್ಷಗಳಿಗೆ ತಕ್ಕ ಉತ್ತರ ನೀಡಿದೆ. ಜನರ ಹಣವನ್ನು ಜನತೆ ಅನುಕೂಲಕ್ಕಾಗಿ ಹಂಚಲಾಗುತ್ತಿದೆಯೇ ಹೊರತು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಕೋಟಿಗಟ್ಟಲೆ ಸಾಲ ಪಡೆದು, ದಿವಾಳಿ ಮಾಡಿಲ್ಲ ಎಂದರು.
ಪಿಡಿಒ ಪ್ರಕಾಶ್ ಮಾತನಾಡಿ, ಗೃಹಲಕ್ಷ್ಮೀ ಯೋಜನೆಗೆ 1600 ಜನರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಪ್ರತಿ ಹಳ್ಳಿಗಳಲ್ಲೂ ಸರ್ಕಾರದ ಯೋಜನೆಯ ವ್ಯಾಪಕ ಪ್ರಚಾರ ಕೈಗೊಂಡ ಪರಿಣಾಮ ನಿರೀಕ್ಷೆಗೂ ಮೀರಿ, ಗ್ರಾಮಸ್ಥರು ಸಮಾರಂಭ ಯಶಸ್ವಿಗೊಳಿಸಿದ್ದಾರೆ ಎಂದರು.
ಮುಖಂಡರಾದ ಶ್ರೀರಾಮಣ್ಣ, ಮುರಳಿ ಗ್ರಾಮಸ್ಥರಾದ ವಸಂತ್, ವೆಂಕಟೇಶ್, ಬೆಟ್ಟೇನಹಳ್ಳಿ ಮುನಿರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net