ಕುಂದಾನಗರಿಯಲ್ಲಿ ಧಾರಾಕಾರ ಮಳೆ

Rain
Published on

ಬೆಳಗಾವಿ: ನಗರವೂ ಸೇರಿ ಜಿಲ್ಲೆಯ ಹಲವೆಡೆ ಸೋಮವಾರ ಉತ್ತಮ ಮಳೆ ಸುರಿಯಿತು. ಬೆಳಗಾವಿಯಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಆಗಾಗ ಸುರಿಯುತ್ತಿದ್ದ ಜಿಟಿಜಿಟಿ ಮಳೆ ಸಂಜೆಯ ಹೊತ್ತಿಗೆ ಚುರುಕು ಪಡೆಯಿತು. 1 ತಾಸಿಗಿಂತ ಹೆಚ್ಚು ಸುರಿದ ಧಾರಾಕಾರ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಯಿತು.

ಮಾರುಕಟ್ಟೆ ಪ್ರದೇಶದಲ್ಲಿ ವ್ಯಾಪಾರ-ವಹಿವಾಟಿಗೆ ತೊಡಕಾಯಿತು. ರಾಯಬಾಗ, ಬೈಲಹೊಂಗಲ ತಾಲೂಕಿನಲ್ಲೂ ಸಾಧಾರಣ ಮಳೆಯಾದರೆ, ಸವದತ್ತಿ ತಾಲೂಕಿನಲ್ಲಿ ಭಾರಿ ಮಳೆ ಸುರಿಯಿತು. ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದಲ್ಲಿ ಸೋಮವಾರ 8,938 ಕ್ಯೂಸೆಕ್ ಒಳಹರಿವು ಇದ್ದರೆ, ಸವದತ್ತಿ ತಾಲೂಕಿನ ನವಿಲುತೀರ್ಥ ಜಲಾಶಯದಲ್ಲಿ 2,204 ಕ್ಯೂಸೆಕ್ ಒಳಹರಿವಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net