ಗ್ರಾಮೀಣ ಭಾಗದಲ್ಲಿ ಕುಂದಾಪ್ರ ಸೊಗಡು

kota-1
Published on

ಕೋಟ: ಕುಂದಾಪ್ರ ಕನ್ನಡದ ನೈಜ ಸೊಗಡು ಕಾಣಸಿಗುವುದು ಗ್ರಾಮಾಂತರ ಭಾಗದಲ್ಲಿ. ಗ್ರಾಮೀಣ ಭಾಗದ ನಾಟಿ ನೆಡುವ ಹೆಂಗಸರು, ಉಳುಮೆ ಮಾಡುವ ಗಂಡಸರು, ಭತ್ತ ತುಳಿಯುವವರು ಹೀಗೆ ಹತ್ತಾರು ವಿಭಾಗಗಳಿಂದ ಕುಂದಾಪ್ರ ಕನ್ನಡದ ಸೊಗಡು ಹರಿದು ಬಂದಿದೆ ಎಂದು ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ತಿಳಿಸಿದರು.

ಕೋಟ ಡಾ.ಶಿವರಾಮ ಕಾರಂತ ಪ್ರತಿಷ್ಠಾನ, ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ, ಕೋಟತಟ್ಟು ಗ್ರಾ.ಪಂ, ಉಸಿರು ಸಂಸ್ಥೆ ಕೋಟ, ಗೀತಾನಂದ ಫೌಂಡೇಶನ್, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಆಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ ಕುಂದಾಪ್ರ ಕನ್ನಡ 5ನೇ ಸಾಹಿತ್ಯ ಸಮ್ಮೇಳನ ಕಾಂಬ ಉದ್ಘಾಟಿಸಿ ಮಾತನಾಡಿದರು.

ಡಾ.ಅಣ್ಣಯ್ಯ ಕುಲಾಲ ಉಳ್ತೂರು ಸಮ್ಮೇಳದ ಅಧ್ಯಕ್ಷತೆ ವಹಿಸಿದ್ದರು. ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ಸತೀಶ್ ಬಾರಿಕೆರೆ, ಪ್ರಮುಖರಾದ ಆನಂದ ಸಿ.ಕುಂದರ್, ಪೂರ್ಣಿಮಾ, ರಾಜೇಶ್ ಗಾಣಿಗ ಅಚ್ಲಾಡಿ, ಸುಬ್ರಾಯ ಆಚಾರ್ಯ ಇದ್ದರು.  ನರೇಂದ್ರ ಕುಮಾರ್ ಕೋಟ ಸ್ವಾಗತಿಸಿದರು. ರಾಮಚಂದ್ರ ಐತಾಳ ವಂದಿಸಿದರು. ಸತೀಶ್ ವಡ್ಡರ್ಸೆ ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net