

ಕುಂದಾಪುರ: ಪುರಸಭೆಯ ಮೂರನೇ ಅವಧಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಡಳಿತ ಪಕ್ಷದ ಸದಸ್ಯ ಪ್ರಭಾಕರ್ ವಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶನಿವಾರ ಪುರಸಭೆಯ ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಆಡಳಿತ ಪಕ್ಷದ ಸದಸ್ಯರಾದ ರೋಹಿಣಿ ಉದಯ ಕುಮಾರ್ರವರು ಪ್ರಭಾಕರ ವಿ.ಹೆಸರನ್ನು ಸೂಚಿಸಿದರು. ಸದಸ್ಯ ಸಂದೀಪ್ ಖಾರ್ವಿ ಅನುಮೋದಿಸಿದರು. ವಿಪಕ್ಷದಿಂದ ಯಾರೂ ಸ್ಪರ್ಧಿಸದಿದ್ದರಿಂದ ಅವಿರೋಧ ಆಯ್ಕೆ ನಡೆಯಿತು.
ಪುರಸಭೆ ಅಧ್ಯಕ್ಷ ಮೋಹನ್ದಾಸ್ ಶೆಣೈ, ಸದಸ್ಯರಾದ ರಾಘವೇಂದ್ರ ಖಾರ್ವಿ, ಚಂದ್ರಶೇಖರ್ ಖಾರ್ವಿ ಅಭಿನಂದಿಸಿದರು. ಉಪಾಧ್ಯಕ್ಷೆ ವನಿತಾ ಎಸ್. ಬಿಲ್ಲವ, ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು. ಪುರಸಭೆ ಮುಖ್ಯಾಧಿಕಾರಿ ಆನಂದ ಜೆ. ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.