

ಕಾರ್ಕಳ: ಹಿರ್ಗಾನ ಕ್ಷೇತ್ರದಿಂದ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ಹಾಸ್ಯ ಚಕ್ರವರ್ತಿ ಅರುಣ್ ಕುಮಾರ್ ಜಾರ್ಕಳ ಆಯ್ಕೆಯಾಗಿದ್ದಾರೆ. ಜ.23ರಂದು ನಡೆಯುವ ಶ್ರೀ ಕುಂದೇಶ್ವರ ಜಾತ್ರೆ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಾಸಕ ವಿ.ಸುನೀಲ್ ಕುಮಾರ್, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರು, ಎಸ್‌ಕೆಎಸ್ ಕಾರ್ಕಳ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಸುಜಯ ಕುಮಾರ್ ಶೆಟ್ಟಿ, ಕಾರ್ಕಳ ಬಿಜೆಪಿ ಅಧ್ಯಕ್ಷ ನವೀನ್ ಕುಮಾರ್ ನಾಯಕ್, ಕಾರ್ಕಳ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಅಜಿತ್ ಹೆಗಡೆ ಮಾಳ ಭಾಗವಹಿಸಲಿದ್ದಾರೆ. ವಕೀಲ ರಮಣಾಚಾರ್ ಅಭಿನಂದನಾ ಭಾಷಣ ಮಾಡುವರು ಎಂದು ಧರ್ಮದರ್ಶಿ ಕೃಷ್ಣರಾಜೇಂದ್ರ ಭಟ್ ತಿಳಿಸಿದ್ದಾರೆ.