

ಹೊನ್ನಾಳಿ: ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡದ ತಾಲೂಕಿನ ಕುಂದೂರು ಗ್ರಾಮ ಪಂಚಾಯಿತಿಯ ಆಡಳಿತ ಮಂಡಳಿಯನ್ನು 1993 ಪ್ರಕರಣ 268ರನ್ವಯ ವಿಸರ್ಜಿಸುವಂತೆ ಜಿಪಂ ಸಿಇಒ ಮತ್ತಿತರರಿಗೆ ಮನವಿ ಸಲ್ಲಿಸಲಾಗಿತ್ತು. ಆದರೂ ಕ್ರಮ ಕೈಗೊಂಡಿಲ್ಲ ಎಂದು ಕುಂದೂರು ಸಾಮಾಜಿಕ ಕಾರ್ಯಕರ್ತ ದೂರಿದರು.
ತಾಲೂಕಿನ ಕುಂದೂರು ಗ್ರಾಪಂ ಆಡಳಿತ ಮಂಡಳಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಾಲೂಕು ಪಂಚಾಯಿತಿ ಇಒ ಪ್ರಕಾಶ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಇಲ್ಲದಂತಾಗಿದೆ. ಇದರಿಂದ ಗ್ರಾಮಸ್ಥರು ಹಾಗೂ ಸೋಂಕು ಹರಡುವ ಭೀತಿ ಉಂಟಾಗಿದೆ. ಈ ವಿಚಾರವಾಗಿ ಆ. 28ರಂದು ದಾವಣಗೆರೆ ಜಿಪಂ ಸಿಇಒ, ಎಸ್‌ಪಿ, ಹೊನ್ನಾಳಿ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ದೂರು ನೀಡಿ, ಕುಂದೂರು ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪಿಡಿಒ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
ಅಲ್ಲದೆ, ಈ ಬಗ್ಗೆ ಕಳೆದ ಅನೇಕ ದಿನಗಳಿಂದ ಗ್ರಾಮದ ಎಲ್ಲ ವಾರ್ಡ್‌ಗಳಲ್ಲಿ ಸ್ವಚ್ಛತೆ ಮಾಡಿಸುವಂತೆ ಮನವಿ ಮಾಡಿದ್ದರೂ ಮನವಿಗೆ ಸ್ಪಂದಿಸಿಲ್ಲ. ಕಾಲಮಿತಿಯೊಳಗೆ ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.