ಕುಪ್ಪೆಪದವು ಸರ್ಕಾರಿ ಶಾಲಾ ವಾರ್ಷಿಕೋತ್ಸವ

Gur_Kuppepadavu
Published on

ಗುರುಪುರ: ಕುಪ್ಪೆಪದವಿನ ಕಿಲೆಂಜಾರು ಅರಮನೆ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಮಕ್ಕಳ ವಾರ್ಷಿಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಕುಪ್ಪೆಪದವು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮೊಹಮ್ಮದ್ ಶರೀಫ್ ಅಧ್ಯಕ್ಷತೆ ವಹಿಸಿದ್ದರು. ಭೋಜರಾಜ್ ಜೈನ್ ಕಾರ್ಯಕ್ರಮ ಉದ್ಘಾಟಿಸಿದರು.

ಪಂಚಾಯಿತಿ ಸದಸ್ಯ ರಫೀಕ್, ದಾನಿಗಳಾದ ವಿಶ್ವನಾಥ ಪಾಕಜೆ, ತಿಮ್ಮಪ್ಪ ಶೆಟ್ಟಿ ಅಗರಿ, ಶಶಿಧರ ಶೆಟ್ಟಿ, ಕಿಲೆಂಜಾರು ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಅನಿಲ್ ಅಂಬೆಲೊಟ್ಟು, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಶೇಖ್ ಅಬ್ದುಲ್ಲ, ಹರಿಶ್ಚಂದ್ರ ಗೌಡ, ಕಣ್ಣೋರಿ ಕ್ಲಸ್ಟರ್‌ನ ಸಿಆರ್‌ಪಿ ಪುಷ್ಪಾವತಿ, ನ್ಯೂ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಮುಸ್ತಫ, ಸೌಹಾರ್ದ ಸ್ಪೋರ್ಟ್ಸ್ ಕ್ಲಬ್‌ನ ರಾಝಿಕ್ ಮತ್ತಿತರರು ಉಪಸ್ಥಿತರಿದ್ದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮುಖ್ಯಶಿಕ್ಷಕ ಬಾಬು ಪಿ.ಎಂ. ಸ್ವಾಗತಿಸಿದರು. ಶಿಕ್ಷಕ ಉದಯ ಕರ್ಕೇರ ವಂದಿಸಿದರು. ಶಿಕ್ಷಕರಾದ ಮಾರ್ಕ್ ಜೆ.ಮೆಂಡೋನ್ಸ, ವಿಮಲಾ ಶೆಟ್ಟಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net