

ಸಿಂಧನೂರು: ಕುರುಬರ ಎಸ್ಟಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷರಾಗಿ ಕೊಪ್ಪಳ ಕ್ಷೇತ್ರದ ಮಾಜಿ ಲೋಕಸಭಾ ಸದಸ್ಯ ಕೆ.ವಿರೂಪಾಕ್ಷಪ್ಪ ನೇಮಕಗೊಂಡಿದ್ದಾರೆ ಎಂದು ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಸ್ವಾಮೀಜಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಕುರುಬ ಸಮುದಾಯವನ್ನು ಎಸ್ಟಿ ಸಮುದಾಯಕ್ಕೆ ಸೇರಿಸುವ ಬೇಡಿಕೆ ಕಳೆದ ಅನೇಕ ವರ್ಷಗಳಿಂದ ಬೇಡಿಕೆಯಾಗಿಯೇ ಉಳಿದಿದ್ದು, ಬೇಡಿಕೆ ಸರ್ಕಾರದ ಮಟ್ಟದಲ್ಲಿ ಜಾರಿಗೆ ತರಲು ಒತ್ತಾಯಿಸುವ ಸದುದ್ದೇಶದಿಂದ ಸಮಿತಿ ರಚಿಸಲಾಗಿದೆ. ಗೌರವಾಧ್ಯಕ್ಷರಾಗಿ ಸಚಿವ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಎಚ್.ವಿಶ್ವನಾಥ, ಬಂಡೆಪ್ಪ ಖಾಶೇಂಪುರ ನೇಮಕಗೊಂಡಿದ್ದಾರೆ. ಮಹಾಮಾರ್ಗದರ್ಶಕರನ್ನಾಗಿ ಕನಕಗುರುಪೀಠದ ಕಾಗಿನೆಲೆ, ಹೊಸದುರ್ಗ, ಕೆ.ಆರ್.ನಗರ ಹಾಗೂ ತಿಂಥಣಿ ಶಾಖೆಯ ಸ್ವಾಮೀಜಿಗಳನ್ನು ನೇಮಕ ಮಾಡಲಾಗಿದೆ. ಎಲ್ಲರೂ ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.