ಜ.28ರಂದು ಚಿತ್ರದುರ್ಗದಲ್ಲಿ ಜಾಗೃತಿ ಸಮಾವೇಶ: ಕುರುಬರ ಸಂಘದ ಜಿಲ್ಲಾಧ್ಯಕ್ಷ ಸುರೇಶ್ ಮಾಹಿತಿ

Kurubara Sanga press conference mandya
Published on

ಮಂಡ್ಯ: ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ ಮತ್ತು ಸ್ವಾಭಿಮಾನದ ರಕ್ಷಣೆಗಾಗಿ ಚಿತ್ರದುರ್ಗದಲ್ಲಿ ಜ.28ರಂದು ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶ ಆಯೋಜಿಸಲಾಗಿದೆ ಎಂದು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಸುರೇಶ್ ತಿಳಿಸಿದರು.

ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಹಿಂದುಳಿದ ಜಾತಿಗಳ ಒಕ್ಕೂಟದ ಸಹಯೋಗದಲ್ಲಿ ಆಯೋಜಿಸಿರುವ ಸಮಾವೇಶವು ಚಿತ್ರದುರ್ಗದ ಬಸವಮೂರ್ತಿ ಮಾದಾರ ಚೆನ್ನಯ್ಯ ಪೀಠದ ಪಕ್ಕದ ಮೈದಾನದಲ್ಲಿ ನಡೆಯಲಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ರಾಜ್ಯದ ಎಲ್ಲ ಶೋಷಿತ ವರ್ಗಗಳ ಸಮಾಜದ ಸಾವಿರಾರು ಜನರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಂತೆಯೇ ಜಿಲ್ಲೆಯಿಂದ 75ರಿಂದ 100 ಬಸ್‌ಗಳಲ್ಲಿ ಸಮುದಾಯದ ಪ್ರತಿನಿಧಿಗಳು ತೆರಳಲಿದ್ದಾರೆ. ಇನ್ನು ಜಾತಿವಾರು ಗಣತಿ ವರದಿ ಬಿಡುಗಡೆಗೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದು ಸರಿಯಲ್ಲ. ಕೋಟ್ಯಂತರ ರೂ ವೆಚ್ಚದಲ್ಲಿ ಜಾತಿವಾರು ಗಣತಿ ನಡೆಸಲಾಗಿದೆ. ಇದು ವ್ಯರ್ಥವಾಗಬಾರದು. ಆದ್ದರಿಂದ ಎಚ್.ಕಾಂತರಾಜು ವರದಿಯನ್ನು ರಾಜ್ಯ ಸರ್ಕಾರವು ಕೂಡಲೇ ಸ್ವೀಕರಿಸಿ, ಸಾರ್ವಜನಿಕ ಚರ್ಚೆಗೆ ಬಿಟ್ಟು ವರದಿಯನ್ನು ಅಂಗೀಕರಿಸಿ ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.

ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಕೆ.ಎಚ್.ನಾಗರಾಜು, ನಗರಸಭೆ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮೀ ರಘುನಂದನ್, ಜಿಲ್ಲಾ ಕುರುಬರ ಸಂಘದ ಉಪಾಧ್ಯಕ್ಷ ಶ್ರೀನಿವಾಸ್, ಮಡಿವಾಳ ಸಮಾಜದ ಮುಖಂಡ ರಮೇಶ್, ಮಳವಳ್ಳಿ ಸುರೇಶ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net