ಆರೋಗ್ಯ ಸಮಸ್ಯೆಗಳಿಗೆ ಉಚಿತ ಚಿಕಿತ್ಸೆ

Kurugodu Helth camp
ಕುರುಗೋಡು ತಾಲೂಕಿನ ಕೆರೆಕೆರೆ ಗ್ರಾಮದಲ್ಲಿ ರಕ್ತದೊತ್ತಡ ಮತ್ತು ಡೆಂೆ ದಿನದ ಕಾರ್ಯಕ್ರಮದಲ್ಲಿ ಆರ್‌ಬಿಎಸ್‌ಕೆ ವೈದ್ಯ ಪ್ರಸನ್ನ ಮಾತನಾಡಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ರಾಘವೇಂದ್ರ, ಸಿಎಚ್‌ಒ ಬಸವರಾಜ, ಡಾ.ವಿಮಲಾ ಇತರರಿದ್ದರು.
Published on

ಕುರುಗೋಡು: ಸಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಜತೆಗೆ ರೋಗಕ್ಕೆ ಅಗತ್ಯ ಚಿಕಿತ್ಸೆ ಪಡಿಯುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಆರ್‌ಬಿಎಸ್‌ಕೆ ವೈದ್ಯ ಪ್ರಸನ್ನ ಹೇಳಿದರು.

ಕೆರೆಕೆರೆ ಗ್ರಾಮದಲ್ಲಿ ಓರ್ವಾಯಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ರಕ್ತದೊತ್ತಡ ಮತ್ತು ಡೆಂೆ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. 18 ವರ್ಷದೊಳಗಿನ ಮಕ್ಕಳಿಗೆ ಹೃದಯ, ಕಿವಿ, ಮಾತಿನ ಸಮಸ್ಯೆ ಜತೆಗೆ ಅಪೌಷ್ಟಿಕತೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ಉಚಿತ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಡಾ.ವಿಮಲಾ ಮಾತನಾಡಿ, 30 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಬಿಪಿ, ಶುಗರ್ ತಪಾಸಣೆ ಮಾಡಿಸಿಕೊಳ್ಳಬೇಕು. ಡೆಂೆ ನಿವಾರಣೆಗೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಡೆಂೆ ಲಕ್ಷಣ ಕಂಡುಬಂದಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಅಗತ್ಯ ಚಿಕಿತ್ಸೆ ಪಡೆಯುವಂತೆ ತಿಳಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ರಾಘವೇಂದ್ರ, ಸಿಎಚ್‌ಒ ಬಸವರಾಜ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net