ಕುಸಿದು ಬಿದ್ದ ಸರ್ಕಾರಿ ಶಾಲೆ ಛಾವಣಿ

21082022 kurugodu school
Published on

ಕುರುಗೋಡು: ತಾಲೂಕಿನ ಕಲ್ಲುಕಂಭ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿ ಗೋಡೆ ಮತ್ತು ಛಾವಣಿ ಶನಿವಾರ ಕುಸಿದು ಬಿದ್ದಿದೆ. ಬೆಳಗ್ಗೆ 11.30 ಆಗಿದ್ದರಿಂದ ವಿದ್ಯಾರ್ಥಿಗಳನ್ನು ಕೊಠಡಿಯಿಂದ ಹೊರಗೆ ಕಳಿಸಲಾಗಿತ್ತು. ಸ್ವಲ್ಪ ಸಮಯದಲ್ಲಿ ಇದ್ದಕ್ಕಿದ್ದಂತೆ ಗೋಡೆ ಕುಸಿದು ಬಿದ್ದಿದೆ. ಹೀಗಾಗಿ ಮಕ್ಕಳಿಗಾಗಲಿ ಶಿಕ್ಷಕರಿಗಾಗಲಿ ತೊಂದರೆಯಾಗಿಲ್ಲ. ಈ ಕುರಿತು ಮಾತನಾಡಿ ಮುಖ್ಯಶಿಕ್ಷಕ ಎಚ್.ಬಸವಾರಾಜ, 1943 ರಲ್ಲಿ ಈ ಶಾಲೆ ನಿರ್ಮಾಣವಾಗಿದೆ. ಶಾಲೆಯಲ್ಲಿ 1 ರಿಂದ 7 ತರಗತಿಯ ಒಟ್ಟು 203 ಮಕ್ಕಳು ಅಭ್ಯಾಸ ಮಾಡುತ್ತಿದ್ದಾರೆ. ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿವೆ. ಛಾವಣಿ ಪದರು ಉದುರುತ್ತಿದೆ. ಹಲವು ಬಾರಿ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ. ಈ ವರೆಗೂ ದುರಸ್ತಿ ಕಾರ್ಯ ನಡೆದಿಲ್ಲ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net