ಗ್ರಾಮಸ್ಥರಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ

120123 Kudutini Farmers Protest
ರೈತರ ಜಮೀನು ವಾಪಾಸ್ ನೀಡುವಂತೆ ಒತ್ತಾಯಿಸಿ ಕುರುಗೋಡು ಸಮೀಪದ ಕುಡತಿನಿಯಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆದಿದ್ದು, ಕನ್ನಡಪರ ಹೋರಾಟಗಾರ ಸಂಪತ್ ಕುಮಾರ್ ಮಾತನಾಡಿದರು.
Published on

ಕುರುಗೋಡು: ರಾಜ್ಯ ಸರ್ಕಾರ ಮತ್ತು ಕಾರ್ಖಾನೆಗಳು ರೈತರ ಜಮೀನುಗಳನ್ನು ಶೀಘ್ರವೇ ವಾಪಾಸ್ ನೀಡದಿದ್ದಲ್ಲಿ ಕುಡತಿನಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಸಂಚಾರ ತಡೆ ನಡೆಸಲಾಗುವುದು ಎಂದು ಕನ್ನಡಪರ ಹೋರಾಟಗಾರ ಸಂಪತ್ ಕುಮಾರ್ ಎಚ್ಚರಿಸಿದ್ದಾರೆ.

ರೈತರ ಜಮೀನು ವಾಪಸಾತಿಗೆ ಒತ್ತಾಯಿಸಿ ಕುಡತಿನಿಯಲ್ಲಿ 24 ದಿನಳಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುತ್ತಿದೆ. ಸರ್ಕಾರ ಅಥವಾ ಕಾರ್ಖಾನೆಗಳ ಮಾಲೀಕರು ಇದನ್ನು ಗಂಭೀರವಾಗಿ ಪರಿಗಣಿಸದಿರುವುದು ಸಮಂಜಸವಲ್ಲ ಎಂದು ಹೇಳಿದರು.

ಸಂಸದ, ಸಚಿವರು ಇತ್ತ ಗಮನ ಹರಿಸಿಲ್ಲ. ಸ್ಥಳಕ್ಕೆ ಭೇಟಿ ನೀಡಿಲ್ಲ. ಸಮಸ್ಯೆ ಬಗ್ಗೆ ತಿಳಿದುಕೊಳ್ಳುತ್ತಿಲ್ಲ. ಇದು ದುರಂತವೇ ಸರಿ. ಇದರ ಬಗ್ಗೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು. ರೈತರಿಗೆ ನ್ಯಾಯ ಸಿಗದಿದ್ದಲ್ಲಿ ಎನ್‌ಎಚ್ 63ಯನ್ನು ಒಂದು ದಿನ ಸಂಪೂರ್ಣವಾಗಿ ಬಂದ್ ಮಾಡಲಾಗುವುದು. ಮುಂಬರುವ ವಿಧಾನಸಭಾ ಚುನಾವಣೆ ವೇಳೆ ಕುಡತಿನಿ, ಜಾನೆಕುಂಟೆ, ಹರಗಿನಡೋಣಿ, ವೇಣಿ ವೀರಾಪುರ, ಕೊಳಗಲ್ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡುವರು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net