ವಿದ್ಯುತ್ ಸಮಸ್ಯೆಗಳಿದ್ದರೆ ತಿಳಿಸಿ

Kurugodu Electricity Safety
ಕುರುಗೋಡಿನಲ್ಲಿ ಜೆಸ್ಕಾಂ ಹಮ್ಮಿಕೊಂಡಿದ್ದ ವಿದ್ಯುತ್ ಸುರಕ್ಷತೆ ಕುರಿತ ಬೀದಿ ನಾಟಕ ಪ್ರದರ್ಶನಕ್ಕೆ ಶಾಸಕ ಜೆ.ಎನ್.ಗಣೇಶ್ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿದರು. ಪುರಸಭೆ ಅಧ್ಯಕ್ಷ ಶೇಖಣ್ಣ, ಉಪಾಧ್ಯಕ್ಷ ಚನ್ನಪಟ್ಟಣ ಮಲ್ಲಿಕಾರ್ಜುನ, ಸದಸ್ಯ ಎನ್.ನಾಗರಾಜ್, ಜೋಗಿ ಸುಂಕಪ್ಪ, ಮಂಜು ಇತರರಿದ್ದರು.
Published on

ಕುರುಗೋಡು: ವಿದ್ಯುತ್ ಸಮಸ್ಯೆಯಾದಾಗ ರೈತರು ತಾಳ್ಮೆ ವಹಿಸಿದರೆ ಆಗುವ ಅವಘಡಗಳನ್ನು ತಪ್ಪಿಸಬಹುದು ಎಂದು ಶಾಸಕ ಜೆ.ಎನ್.ಗಣೇಶ್ ಹೇಳಿದರು.

ಜೆಸ್ಕಾಂ ಉಪವಿಭಾಗದಿಂದ ದೊಡ್ಡಬಸವೇಶ್ವರ ದೇವಸ್ಥಾನದ ಬಳಿ ವಿದ್ಯುತ್ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು. ರೈತರು ಹಾಗೂ ಸಾರ್ವಜನಿಕರು ಯಾವುದೇ ರೀತಿ ವಿದ್ಯುತ್ ಸಂಬಂಧಿತ ಸಮಸ್ಯೆಗಳು ಕಂಡುಬಂದರೆ ಅಧಿಕಾರಿಗಳಿಗೆ ತಿಳಿಸಬೇಕು. ವಿದ್ಯುತ್ ಸಂಬಂಧಿತ ಸಮಸ್ಯೆಗಳ ಪರಿಹಾರಕ್ಕಾಗಿ ಜೆಸ್ಕಾಂನಿಂದ ದಿನದ 24 ಗಂಟೆ ಕಾರ್ಯನಿರ್ವಹಿಸುವ ಸಹಾಯವಾಣಿ, ವಾಟ್ಸಾೃಪ್ ಮತ್ತಿತರ ತುರ್ತು ಸಂಪರ್ಕ ಸಂಖ್ಯೆಗಳನ್ನು ನೀಡಲಾಗಿದೆ ಎಂದರು. ವಿದ್ಯುತ್ ಸುರಕ್ಷತಾ ಮುಂಜಾಗ್ರತಾ ಕ್ರಮಗಳ ಸೂಚನಾ ಫಲಕಗಳ ಪ್ರದರ್ಶಿಸುವ ಮೂಲಕ ಜಾಗೃತಿ ಮೂಡಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net