ಕನ್ನಡ ಪರಂಪರಗೆ ಸುದೀರ್ಘವಾದ ಇತಿಹಾಸ

Untitled design (18)
ಕುರುಗೋಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ‘ರನ್ನನ ಅಭಿಮಾನಧನ ಸುಯೋಧನ’ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಅಕಾಡೆಮಿ ಸದಸ್ಯ ಡಾ.ಸಿ.ಬಿ.ಚಿಲ್ಕರಾಗಿ, ಮೋಕಾ ಕಾಲೇಜಿನ ಪ್ರಾಧ್ಯಾಪಕ ಡಾ.ಸೋಮಶೇಖರ, ಚಕೋರ ವೇದಿಕೆ ಜಿಲ್ಲಾ ಸಂಚಾಲಕ ಸಾಹಿತಿ ಅಬ್ದುಲ್ ಹೈ ತೋರಣಗಲ್ ಇದ್ದರು.
Published on

ಕುರುಗೋಡು: ಯುವ ಸಮೂಹ ನೆಲ, ಜಲ, ಸಂಸ್ಕೃತಿ ಬಗ್ಗೆ ತಿಳಿದುಕೊಳ್ಳಲು ಮುಂದಾಗಲಿ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಸಿ.ಬಿ.ಚಿಲ್ಕರಾಗಿ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು ಹಾಗೂ ಕನ್ನಡ ವಿಭಾಗ, ಚಕೋರ ಸಾಹಿತ್ಯ ವಿಚಾರ ವೇದಿಕೆಯಿಂದ ಗುರುವಾರ ಹಮ್ಮಿಕೊಂಡಿದ್ದ ‘ರನ್ನನ ಅಭಿಮಾನಧನ ಸುಯೋಧನ’ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು. ಕನ್ನಡ ಸಾಹಿತ್ಯ ಪರಂಪರೆಗೆ ಸುದೀರ್ಘ ಇತಿಹಾಸ ಇದೆ. ಅದರಲ್ಲೂ ರನ್ನರ ಕೊಡುಗೆ ಅಪಾರವಾಗಿದೆ. ಅವರ ಗುಣಕ್ಕೆ ಮತ್ಸರವಿಲ್ಲ ಎನ್ನುವ ಮೌಲ್ಯ ಕನ್ನಡಕ್ಕೆ ಕೊಡುಗೆಯಾಗಿದೆ ಎಂದರು.

ಇದನ್ನೂ ಓದಿ: http://ಕನ್ನಡ

ಮೋಕಾ ಕಾಲೇಜಿನ ಪ್ರಾಧ್ಯಾಪಕ ಡಾ.ಸೋಮಶೇಖರ ಎಂ.ಮಾತನಾಡಿ, ಹಳಗನ್ನಡ ಸಾಹಿತ್ಯದಲ್ಲಿ ರನ್ನನಿಗೆ ವಿಶೇಷ ಸ್ಥಾನವಿದೆ. ಗದಾಯುದ್ಧ ಎಂಬ ಮಹಾಕಾವ್ಯದಲ್ಲಿ ದುರ್ಯೋಧನನನ್ನು ವಿಭಿನ್ನವಾಗಿ ಕಟ್ಟಿಕೊಟ್ಟ ಶ್ರೇಯಸ್ಸು ರನ್ನನಿಗೆ ಸಲ್ಲುತ್ತದೆ ಎಂದರು.

ಚಕೋರ ವೇದಿಕೆ ಜಿಲ್ಲಾ ಸಂಚಾಲಕ ಸಾಹಿತಿ ಅಬ್ದುಲ್ ಹೈ ತೋರಣಗಲ್ ಮಾತನಾಡಿ, ಯುವಜನತೆ ಸಾಹಿತ್ಯಕ ಮೌಲ್ಯ ಬೆಳೆಸಿಕೊಳ್ಳಬೇಕಾಗಿದೆ. ತಂತ್ರಜ್ಞಾನ, ಪಠ್ಯ ಜತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಿಬೇಕು ಎಂದು ತಿಳಿಸಿದರು.

ಪ್ರಾಚಾರ್ಯ ಡಾ.ಶಶಿಕಾಂತ, ಕನ್ನಡ ವಿಭಾಗದ ಮುಖ್ಯಸ್ಥ ಡಾ.ತಿಪ್ಪೇರುದ್ರ ಸಂಡೂರು, ಬಂಡ್ರಿ ಯಂಕಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net