ಸರ್ಕಾರಿ ನೌಕರರಿಗೆ ಆದ ಅನ್ಯಾಯವನ್ನು ಸರಿಪಡಿಸುವಂತೆ ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿಗೆ ಮನವಿಪತ್ರ

20082022 KURUGODU NEWS
Published on

ಕುರುಗೋಡು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕ ಶುಕ್ರವಾರ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿಗೆ ಮನವಿಪತ್ರ ಸಲ್ಲಿಸಲಾಯಿತು.

ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಗುಂಡಪ್ಪನವರ ನಾಗರಾಜ ಮಾತನಾಡಿ, ಕೇಂದ್ರ ಸರ್ಕಾರ ಮಾದರಿಯಲ್ಲಿ ರಾಜ್ಯ ನೌಕರರಿಗೂ ವೇತನ ಕಲ್ಪಿಸಬೇಕು, ಶಿಕ್ಷಕರಿಗೆ ಚುನಾವಣೆ ಕರ್ತವ್ಯ ಹೊರತುಪಡಿಸಿ ಇನ್ನುಳಿದ ಬಿಎಲ್‌ಒ ಆಧಾರ್ ಸೀಡಿಂಗ್ ಕಾರ್ಯದಿಂದ ಮುಕ್ತಗೊಳಿಸಬೇಕು. ಎನ್‌ಪಿಎಸ್ ಪದ್ಧತಿಯನ್ನು ರದ್ದುಗೊಳಿಸಿ ಒಪಿಎಸ್ ಜಾರಿಗೆ ತರಬೇಕು. ಇದರಿಂದ 2006ರ ನಂತರ ಸರ್ಕಾರಿ ನೌಕರರಿಗೆ ಆದ ಅನ್ಯಾಯವನ್ನು ಸರಿಪಡಿಸಬೇಕು ಹಾಗೂ ಕುರುಗೋಡು ತಾಲೂಕಿಗೆ ಸರ್ಕಾರಿ ನೌಕರರಿಗೆ ಹಾಗೂ ಶಿಕ್ಷಕರಿಗೆ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಕನ್ವೆಷನ್ ಹಾಲ್ ನಿರ್ಮಿಸಿಕೊಡುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ತುಕಾರಾಮ್ ಗೊರವ ಹಾಗೂ ಸಂಘದ ಪದಾಧಿಕಾರಿಗಳಾದ ಬಸವರಾಜ, ದಿನೇಶ್, ರಘು, ಶ್ರೀಕಾಂತ್, ಪಾಟೀಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net