ಲಾಟರಿ, ಸಾರಾಯಿ ನಿಷೇಧ ಮಾಡಿದ್ದು ಜೆಡಿಎಸ್ ಸರ್ಕಾರ

Kurugodu JDS Samavesha
ಕುರುಗೋಡಿನ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಂಪ್ಲಿ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರ ಸಮಾವೇಶವನ್ನು ಪಕ್ಷದ ಪಕ್ಷದ ವಿಕಲಚೇತನ ಘಟಕದ ರಾಜ್ಯಾಧ್ಯಕ್ಷ ಎಸ್.ದೇವೆಂದ್ರಗೌಡ ಉದ್ಘಾಟಿಸಿದರು.
Published on

ಕುರುಗೋಡು: ಲಾಟರಿ ಹಾಗೂ ಸಾರಾಯಿ ನಿಷೇಧ ಮಾಡಿದ್ದು ಜೆಡಿಎಸ್ ಸರ್ಕಾರ ಎಂದು ಪಕ್ಷದ ವಿಕಲಚೇತನ ಘಟಕದ ರಾಜ್ಯಾಧ್ಯಕ್ಷ ಎಸ್.ದೇವೆಂದ್ರಗೌಡ ಹೇಳಿದರು.

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಕಂಪ್ಲಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ಭಾರತದಲ್ಲಿ ಮೊದಲ ಬಾರಿಗೆ ಅಂಗವಿಕಲರ ಸಮಾವೇಶ ಮಾಡಿದ್ದು ಮಾಜಿ ಸಿಎಂ ಕುಮಾರಸ್ವಾಮಿ. ಬಸ್‌ಗಳಲ್ಲಿ ಅಂಗವಿಕಲರಿಗೆ ಸೀಟ್ ಮೀಸಲಾತಿ ನೀಡಿದ್ದು ಜೆಡಿಎಸ್ ಸರ್ಕಾರ. ಎಚ್.ಡಿ.ದೇವೇಗೌಡರು ಮುಖ್ಯಮಂತ್ರಿ ಆಗಿದ್ದಾಗ ದೇಶದಲ್ಲೇ ಪ್ರಥಮ ಬಾರಿಗೆ ಅಂಗವಿಕಲರೊಬ್ಬರನ್ನು ಎಂಎಲ್‌ಸಿ ಮಾಡಿದ್ದರು ಎಂದರು.

ಪಕ್ಷದ ಜಿಲ್ಲಾ ಗೌರವಾಧ್ಯಕ್ಷ ಕೆ.ಎಂ.ಹೇಮಯ್ಯ ಸ್ವಾಮಿ ಮಾತನಾಡಿ, ಕಂಪ್ಲಿ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಕಾರ್ಯಕರ್ತರ ಕೊರತೆ ಇಲ್ಲ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು. ಕಾರ್ಯಕರ್ತರು ಹೆಚ್ಚಿನ ಶ್ರಮವಹಿಸಿ, ಪಕ್ಷದ ಅಭ್ಯರ್ಥಿ ಗೆಲ್ಲಲು ಸಹಕರಿಸಬೇಕು ಎಂದರು.

ಪಕ್ಷದ ಜಿಲ್ಲಾಧ್ಯಕ್ಷ ಪಿಎಸ್. ಸೋಮಲಿಂಗನಗೌಡ ಮಾತನಾಡಿ, ರೈತಾಪಿ ವರ್ಗ ನೆಮ್ಮದಿಯ ಜೀವನ ನಡೆಸಲು ರಾಜ್ಯದ ಜನತೆಗೆ ಎಚ್.ಡಿ.ಕುಮಾರಸ್ವಾಮಿ ಸರ್ಕಾರ ಅನಿವಾರ್ಯ. ಗ್ರಾಪಂ ವ್ಯಾಪ್ತಿಯಲ್ಲಿ 30 ಹಾಸಿಗೆಗಳ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಹಾಗೂ ಪಂಚರತ್ನ ಯೋಜನೆ ಜಾರಿಯಾಗಲು ಪೂರ್ಣ ಬಹುಮತದೊಂದಿಗೆ ಜೆಡಿಎಸ್ ಸರ್ಕಾರ ಬರಬೇಕು. ಪ್ರಜ್ಞಾವಂತ ಮತದಾರರು ಜೆಡಿಎಸ್‌ಗೆ ಬೆಂಬಲ ನೀಡಬೇಕು ಎಂದರು.

ಪ್ರಮುಖರಾದ ಹೇಮರೆಡ್ಡಿ, ನಾರಾಯಣರೆಡ್ಡಿ, ಶ್ರೀನಿವಾಸ, ಕೊರ‌್ಲಗುಂದಿ ಪಂಪಾಪತಿ, ಲಕ್ಷ್ಮೀನಾರಾಯಣ ರೆಡ್ಡಿ, ವಿಜಯಕುಮಾರಿ, ಕೋಮಲಾದೇವಿ, ಶಿವನಾರಾಯಣ, ಮುಕ್ಕಣ್ಣ, ವಿಬಿ ಗೌಡ, ಬಂಡೆಗೌಡ, ಪ್ರಸಾದ್, ಕೆ.ಎಚ್.ವೀರೇಶ್, ವಿಶ್ವನಾಥ ಸ್ವಾಮಿ, ಗೆಣಿಕೆಹಾಳು ಹಸನ್, ಸಿದ್ದಮ್ಮನಹಳ್ಳಿ ವೀರೇಶ, ಗವಿಸಿದ್ದಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net