ಅಕಾಲಿಕ ಮಳೆಗೆ ನೆಲಕ್ಕೊರಗಿದ ಭತ್ತದ ಬೆಳೆ ವೀಕ್ಷಿಸಿದ ಕಂಪ್ಲಿ ತಹಸೀಲ್ದಾರ್ ಎಂ.ರೇಣುಕಾ

22042020 Kurugodu tashildar vist
Published on

ಕುರುಗೋಡು: ಎಮ್ಮಿಗನೂರು ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಬಿರುಗಾಳಿಯೊಂದಿಗೆ ಸುರಿದ ಅಕಾಲಿಕ ಮಳೆಯಿಂದ ಕಟಾವಿಗೆ ಬಂದಿದ್ದ ಭತ್ತದ ಬೆಳೆ ನೆಲಕ್ಕಚ್ಚಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕಂಪ್ಲಿ ತಹಸೀಲ್ದಾರ್ ಎಂ.ರೇಣುಕಾ ಜಮೀನುಗಳಿಗೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

ಎಮ್ಮಿಗನೂರು ಹಾಗೂ ಬಳ್ಳಾಪುರ ಸೇರಿದಂತೆ ವಿವಿಧ ಪ್ರದೇಶದ ಹೊಲಗಳನ್ನು ವೀಕ್ಷಿಸಿದರು. ಬಳಿಕ ಮಾತನಾಡಿದ ಅವರು, ಕೃಷಿ ಅಧಿಕಾರಿ ಹಾಗೂ ಕಂದಾಯ ಇಲಾಖೆ ಜಂಟಿಯಾಗಿ ಹಾನಿಯಾದ ಭತ್ತದ ಬೆಳೆಯನ್ನು ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಮೀಕ್ಷೆ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ನಂತರ ಎಮ್ಮಿಗನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು. ರೋಗಿಗಳಲ್ಲಿ ಹೆಚ್ಚಿನ ಸೋಂಕು ಕಂಡು ಬಂದಲ್ಲಿ ಕಂಪ್ಲಿ, ಕುರುಗೋಡು ಹಾಗೂ ಬಳ್ಳಾರಿ ಒಪಿಡಿಗೆ ಕಳುಹಿಸುವಂತೆ ವೈದ್ಯಾಧಿಕಾರಿಗೆ ಸೂಚಿಸಿದರು. ವೈದ್ಯಾಧಿಕಾರಿ ಶ್ರೀಕರ್ ಗೌಡ, ಕಂದಾಯ ಪರಿವೀಕ್ಷಕ ಎಸ್.ಎಸ್. ತಂಗಡಗಿ, ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ, ರೈತ ಮುಖಂಡರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net