ಮಹನೀಯರ ಆದರ್ಶ ಅಳವಡಿಸಿಕೊಳ್ಳಿ

Untitled design (21)
ಕುರುಗೋಡು ತಹಸಿಲ್ ಕಚೇರಿಯಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಿಸಲಾಯಿತು. ಗ್ರೇಡ್-2 ತಹಸೀಲ್ದಾರ್ ಮಲ್ಲೇಶಪ್ಪ, ಸಿಬ್ಬಂದಿ ವಿಜಯಕುಮಾರ್, ಜ್ಯೋತಿ ಇತರರಿದ್ದರು.
Published on

ಕುರುಗೋಡು: ವಚನಕಾರ ಅಂಬಿಗರ ಚೌಡಯ್ಯ ಅವರು ಬಸವಣ್ಣನವರ ಸಮಕಾಲೀನರಾಗಿದ್ದಾರೆ. ನೇರ, ನಿಷ್ಠುರವಾದಿಯಾಗಿದ್ದ ಚೌಡಯ್ಯ, ವಚನಗಳ ಮೂಲಕ ಸಮಾಜ ತಿದ್ದುವ ಕೆಲಸ ಮಾಡಿದರು ಎಂದು ಗ್ರೇಡ್-2 ತಹಸೀಲ್ದಾರ್ ಮಲ್ಲೇಶಪ್ಪ ಹೇಳಿದರು.

ಪಟ್ಟಣದ ತಹಸಿಲ್ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಂಬಿಗರ ಚೌಡಯ್ಯ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಜಯಂತಿಗಳನ್ನು ಕೇವಲ ಆಚರಣೆಗೆ ಸೀಮಿತಗೊಳಿಸಬಾರದು. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಅಂಬಿಗರ ವಿಚಾರಧಾರೆಗಳನ್ನು ಸಮಾಜಕ್ಕೆ ಪರಿಚಯಿಸುವ ಕಾರ್ಯವಾಗಲಿ ಎಂದರು. ಸಿಬ್ಬಂದಿ ವಿಜಯಕುಮಾರ್, ಜ್ಯೋತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net