ಶಿಕ್ಷಣದ ಜತೆಗೆ ವಿದ್ಯಾರ್ಥಿಗಳು ಉತ್ತಮ ಗುಣ, ನಡತೆಯನ್ನು ರೂಢಿಸಿ

12Kush02
Published on

ಕುಶಾಲನಗರ: ಶಿಕ್ಷಣದ ಜತೆಗೆ ವಿದ್ಯಾರ್ಥಿಗಳು ಉತ್ತಮ ಗುಣ, ನಡತೆಯನ್ನು ರೂಢಿಸಿಕೊಂಡು ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಅನುಗ್ರಹ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಿಂಗಮೂರ್ತಿ ಹೇಳಿದರು. ಕಾಲೇಜಿನ ಪ್ರಥಮ ವರ್ಷದ ಬಿಕಾಂ ಮತ್ತು ಬಿಸಿಎ ವಿದ್ಯಾರ್ಥಿಗಳಿಗೆ ಸೋಮವಾರ ಹಮ್ಮಿಕೊಂಡಿದ್ದ ಓರಿಯಂಟೇಶನ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಉಪನ್ಯಾಸಕ ನೌಶದ್ ಕಾಲೇಜಿನ ನಿಯಮಗಳು ಮತ್ತು ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ವಿವರಿಸಿದರು.
ಪದವಿ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.ಇದೇ ಸಂದರ್ಭ ನಶಾಮುಕ್ತ ಭಾರತ್ ಅಭಿಯಾನ ನಡೆಸಲಾಯಿತು. ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ನಂತರ ವಿದ್ಯಾರ್ಥಿಗಳು ‘ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುವುದಿಲ್ಲ’ ಎಂದು ಪ್ರಮಾಣ ವಚನ ಸ್ವೀಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net