ಕುಲಪತಿ ಪ್ರೊ. ಅಶೋಕ ಸಂಗಪ್ಪಗೆ ಪರಿಮಳ ಪ್ರಶಸ್ತಿ

03Kush04
Published on

ಕುಶಾಲನಗರ : ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ 2024ರ ಮಂತ್ರಾಲಯ ಮಠದ ಪ್ರತಿಷ್ಠಿತ ಪರಿಮಳ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಶ್ರೀ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವದ ಅಂಗವಾಗಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಪ್ರಶಸ್ತಿ ಪ್ರದಾನ ಮಾಡಿದರು. ಚಿತ್ರನಟ ರಮೇಶ್ ಅರವಿಂದ್ ಇತರರು ಹಾಜರಿದ್ದರು.
ಕೃಷಿ, ತೋಟಗಾರಿಕೆ, ಉನ್ನತ ಶಿಕ್ಷಣ, ನೈಸರ್ಗಿಕ ಸಂಪನ್ಮೂಲ ನಿರ್ವಹಣೆಯಲ್ಲಿ ಸುಮಾರು 25 ವರ್ಷಗಳ ಅನುಭವ ಹೊಂದಿರುವ ಪ್ರೊ.ಅಶೋಕ ಸಂಗಪ್ಪ ಮೂಲತಃ ಬಾಗಲಕೋಟೆ ಜಿಲ್ಲೆಯವರು. ಧಾರವಾಡದ ಕೃಷಿ ವಿವಿಯಿಂದ ಪಿಎಚ್ ಡಿ ಪದವಿ ಪಡೆದಿರುವ ಇವರು, ಮಣ್ಣು ಆರೋಗ್ಯ, ಜಲಾನಯನ ಅಭಿವೃದ್ಧಿ, ಕೃಷಿ, ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ, ಅಂತಾರಾಷ್ಟ್ರೀಯ ಸಹಕಾರ, ಆಹಾರ ಭದ್ರತೆ, ಸಾಂಸ್ಥಿಕ ಅಭಿವೃದ್ಧಿ, ವಾಣಿಜ್ಯೋದ್ಯಮ ಅಭಿವೃದ್ಧಿ ಮೊದಲಾದ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವುದು ವಿಶೇಷ. ಕಳೆದ ಒಂದು ವರ್ಷದಿಂದ ಕೊಡಗು ವಿವಿ ಕುಲಪತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net