ಕೂಡುಮಂಗಳೂರು ಗೋ ಗ್ರೀನ್ ಅಭಿಯಾನ

05Kush01
Published on

ಕುಶಾಲನಗರ : ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್‌ಡಿಎಂಸಿ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಭೂ ಮರುಸ್ಥಾಪನೆ, ಮರು ಭೂಮೀಕರಣ ಹಾಗೂ ಬರ ತಡೆಯುವಿಕೆ ಎಂಬ ವಿಷಯದಡಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ‘ನಮ್ಮ ನಡೆ ಪರಿಸರದೆಡೆಗೆ -ಗೋ ಗ್ರೀನ್ ಅಭಿಯಾನ’ ಕ್ಕೆ ಚಾಲನೆ ನೀಡಲಾಯಿತು.
ಅಭಿಯಾನಕ್ಕೆ ಚಾಲನೆ ನೀಡಿದ ಎಸ್‌ಡಿಎಂಸಿ ಅಧ್ಯಕ್ಷ ಎ.ಎಂ.ಜವರಯ್ಯ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಪರಿಸರದಲ್ಲಿ ಗಿಡ ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಯ ರಾಯಭಾರಿಗಳಾಗಬೇಕು ಎಂದರು.
ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಭವಿಷ್ಯದ ದೃಷ್ಟಿಯಿಂದ ನಾವು ಅರಣ್ಯ ಸಂರಕ್ಷಣೆಗಾಗಿ ಹೆಚ್ಚೆಚ್ಚು ಗಿಡ ಮರಗಳನ್ನು ಬೆಳೆಸುವ ಮೂಲಕ ಅರಣ್ಯ ಪ್ರದೇಶ ವೃದ್ಧಿ ಮಾಡಬೇಕು. ವಿದ್ಯಾರ್ಥಿಗಳು ಪರಿಸರ ಸಂರಕ್ಷಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ನಿಸರ್ಗ ಪ್ರೀತಿ ರೂಢಿಸಿಕೊಳ್ಳಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net