

ಕುಶಾಲನಗರ:
ಕೊಡಗು ಜಿಲ್ಲೆಯನ್ನು ಸ್ವಚ್ಛವಾಗಿಡಲು ಎಲ್ಲರೂ ಬದ್ಧರಾಗಬೇಕು ಎಂದು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಹೇಳಿದರು. ಕುಶಾಲನಗರದಲ್ಲಿ ಬುಧವಾರ ನಡೆದ ಸ್ವಚ್ಛ ಕೊಡಗು, ಸುಂದರ ಕೊಡಗು ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದರು.
ಕೊಡಗು ಜಿಲ್ಲೆಯ ಪ್ರಕೃತಿ ಸೌಂದರ್ಯಕ್ಕೆ ಧಕ್ಕೆಯಾಗದ ರೀತಿಯಲ್ಲಿ ಕಾಪಾಡಿಕೊಳ್ಳುವುದು ಎಲ್ಲರ ಜವಾಬ್ದಾರಿ ಆಗಿದೆ. ಅದನ್ನು ಉಳಿಸುವ ನಿಟ್ಟಿನಲ್ಲಿ ವಿವಿಧ ಸಂಘಟನೆಗಳು ಪಾಲ್ಗೊಂಡು ಸ್ವಚ್ಛತೆಗಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.
ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಕುಶಾಲನಗರ ಸ್ಥಾನೀಯ ಸಮಿತಿ ಅಧ್ಯಕ್ಷ ಕೆ.ಎಸ್. ನಾಗೇಶ್ ಮಾತನಾಡಿ, ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವುದು ಎಲ್ಲರ ಕರ್ತವ್ಯ. ಇಂತಹ ಅಭಿಯಾನ ನಿತ್ಯ ನಿರಂತರವಾಗಿ ನಡೆಯಬೇಕೆಂದರು.
ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು, ಕುಶಾಲನಗರ ಪಟ್ಟಣ ಸೇರಿದಂತೆ ಜಿಲ್ಲೆಯಲ್ಲಿ ಸ್ವಚ್ಛತೆ ಕಾಪಾಡಲು ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಎಂದರು.
ಕುಶಾಲನಗರ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಮಾಜಿ ಅಧ್ಯಕ್ಷ ಬಿ.ಜಿ. ಮಂಜುನಾಥ್ ಗುಂಡೂರಾವ್, ಪುರಸಭೆಯ ಮುಖ್ಯಾಧಿಕಾರಿ ಟಿ.ಜೆ. ಗಿರೀಶ್, ಹಿರಿಯ ಆರೋಗ್ಯ ನಿರೀಕ್ಷಕ ಉದಯ್ ಕುಮಾರ್, ವೃತ್ತ ನಿರೀಕ್ಷಕ ದಿನೇಶ್ ಕುಮಾರ್, ಟ್ರಾವೆಲ್ಸ್ ಅಸೋಸಿಯೇಷನ್ ಪ್ರಮುಖರಾದ ಜನಾರ್ದನ ಪ್ರಭು, ಡಿ.ಕೆ. ಮಂಜುನಾಥ್, ಹೆಚ್.ಎಂ. ಚಂದ್ರು, ವಿವಿಧ ಸಂಘಟನೆಗಳ ಪ್ರಮುಖರಾದ ಜೋಸೆಫ್ ವಿಕ್ಟರ್ ಸೋನ್ಸ್, ಎಂ.ಡಿ.ರAಗಸ್ವಾಮಿ, ಚಿತ್ರಾ ರಮೇಶ್, ಕೆ.ಎಸ್. ರಾಜಶೇಖರ್, ಕೆ.ಜಿ. ಸತೀಶ್, ಕೆ.ಬಿ. ರಾಜು, ಟಿ.ಜಿ. ಪ್ರೇಮಕುಮಾರ್ ಪಾಲ್ಗೊಂಡಿದ್ದರು.
ಪಟ್ಟಣದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತದಿಂದ ಆರಂಭಗೊAಡ ಸ್ವಚ್ಛತಾ ಕಾರ್ಯ ಪಟ್ಟಣದ ಪ್ರಮುಖ ಬೀದಿ, ಅಯ್ಯಪ್ಪ ಸ್ವಾಮಿ ರಸ್ತೆ, ರಥಬೀದಿ, ಖಾಸಗಿ ಬಸ್ ನಿಲ್ದಾಣದ ಬಳಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯಿತು.