

ಕುಷ್ಟಗಿ: ಬ್ಯಾಂಕ್‌ಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು. ಅವುಗಳು ಸರಿಯಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದು ವಿವಿಧ ಬ್ಯಾಂಕ್ ವ್ಯವಸ್ಥಾಪಕರಿಗೆ ಪಿಎಸ್‌ಐ ಹನುಮಂತಪ್ಪ ತಳವಾರ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಜಾಗೃತಿ ಸಭೆಯಲ್ಲಿ ಮಾತನಾಡಿದರು. ಎಟಿಎಂ ಕೇಂದ್ರಕ್ಕೆ ಹಣ ಜಮಾ ಮಾಡುವ ವೇಳೆ, ಬೇರೆಡೆ ಹಣ ತಗೆದುಕೊಂಡು ಹೋಗುವಾಗ ಗನ್ ಮ್ಯಾನ್ ಇರಬೇಕು. ಅಪರಿಚಿತರು ಬಂಗಾರ ಹಾಗೂ ಒಡವೆಗಳನ್ನಿಟ್ಟು ಸಾಲ ಪಡೆಯಲು ಬಂದಾಗ ಅವರ ಹಿನ್ನೆಲೆ ತಿಳಿದುಕೊಂಡು ವ್ಯವಹರಿಸಬೇಕು. ಬಟ್ಟೆ ಇನ್ನಿತರ ವಸ್ತುಗಳನ್ನು ಮಾರಾಟ ಮಾಡುವ ನೆಪದಲ್ಲಿ ಬರುವ ವ್ಯಕ್ತಿಗಳ ಮೇಲೆ ನಿಗಾ ಇಡಬೇಕು ಎಂದು ಸಲಹೆ ನೀಡಿದರು. ಪಟ್ಟಣದ ವಿವಿಧ ಬ್ಯಾಂಕ್‌ಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಲಾಯಿತು.