ಅಡುಗೆ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಿ

MLA
ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದ ಸ.ಹಿ.ಪ್ರಾ. ಶಾಲೆಗೆ ಭೇಟಿ ನೀಡಿದ ಶಾಸಕ ದೊಡ್ಡನಗೌಡ ಪಾಟೀಲ್, ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಿದರು. ವಿಪ ಸದಸ್ಯೆ ಹೇಮಲತಾ ನಾಯಕ, ತಹಸೀಲ್ದಾರ್ ಅಶೋಕ ಶಿಗ್ಗಾವಿ ಇತರರಿದ್ದರು.
Published on

ಕುಷ್ಟಗಿ: ತಾಲೂಕಿನ ಬಿಜಕಲ್ ಗ್ರಾಮದ ಸ.ಹಿ.ಪ್ರಾಶಾಲೆಯಲ್ಲಿ ಬಿಸಿಯೂಟ ಸೇವಿಸಿ ಮಕ್ಕಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ದೊಡ್ಡನಗೌಡ ಪಾಟೀಲ್, ವಿಪ ಸದಸ್ಯೆ ಹೇಮಲತಾ ನಾಯಕ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಬುಧವಾರ ಶಾಲೆಗೆ ಭೇಟಿ ನೀಡಿ ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಿದರು.

ಬಿಸಿಯೂಟದಲ್ಲಿನ ವ್ಯತ್ಯಾಸದಿಂದಾಗಿ ಮಕ್ಕಳು ಅಸ್ವಸ್ಥರಾಗಿದ್ದಾರೆ. ಹೀಗಾಗಿ ಅಡುಗೆ ಸಿಬ್ಬಂದಿ ಕೆಲಸದಿಂದ ತಗೆದು ಹಾಕಿ ಬೇರೆಯವರ ನೇಮಕಕ್ಕೆ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ಗ್ರಾಮದಲ್ಲಿ ಹಾಗೂ ಶಾಲೆ ಸುತ್ತ ಸ್ವಚ್ಛತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಪಂ ಪಿಡಿಒ ಆನಂದರಾವ್ ಕುಲಕರ್ಣಿಗೆ ಸೂಚನೆ ನೀಡಿದರು. ತಹಸೀಲ್ದಾರ್ ಅಶೋಕ ಶಿಗ್ಗಾವಿ, ಬಿಇಒ ಸುರೇಂದ್ರ ಕಾಂಬಳೆ, ಅಕ್ಷರ ದಾಸೋಹ ಆಧಿಕಾರಿ ಕೆ. ಶರಣಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net