ಸೋಂಕು ತೀವ್ರತೆ ತಡೆಗೆ ಬೂಸ್ಟರ್ ಡೋಸ್, ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಹೇಳಿಕೆ

100122 Kushtagi Booster Dose
ಕುಷ್ಟಗಿ ತಾಲೂಕು ಆಸ್ಪತ್ರೆಯಲ್ಲಿ ಬೂಸ್ಟರ್ ಡೋಸ್ ಲಸಿಕಾಕರಣಕ್ಕೆ ಸೋಮವಾರ ಚಾಲನೆ ನೀಡಲಾಯಿತು.
Published on

ಕುಷ್ಟಗಿ: ಕೋವಿಡ್ ಮೂರನೇ ಅಲೆಯ ತೀವ್ರತೆ ತಡೆಯಲು ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿದೆ ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಹೇಳಿದರು.

ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಬೂಸ್ಟರ್ ಡೋಸ್ ಲಸಿಕಾಕರಣಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು. ಸರ್ಕಾರ ಜನರ ಒಳಿತಿಗಾಗಿಯೇ ಕೆಲಸ ಮಾಡುತ್ತಿದೆ. ಸದ್ಯ ಲಸಿಕೆಯ ಮೂರನೇ ಡೋಸ್ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಜನರು ಯಾವುದೇ ಕಾರಣಕ್ಕೂ ಅಸಡ್ಡೆ ತೋರದೆ ಸರ್ಕಾರದ ನಿಯಮಾವಳಿಗಳನ್ನು ಪಾಲಿಸಬೇಕು. ಲಸಿಕೆಯ ಒಂದನೇ ಡೋಸ್ ಸಹ ಹಾಕಿಸಿಕೊಳ್ಳದವರೂ ಇದ್ದಾರೆ. ಅಂಥವರು ಕೂಡಲೇ ಲಸಿಕೆ ಪಡೆಯಬೇಕು ಎಂದರು.

ಮೊದಲ ಹಂತವಾಗಿ ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಬೂಸ್ಟರ್ ಡೋಸ್ ಹಾಕಿಸಿಕೊಂಡರು. ಟಿಎಚ್‌ಒ ಆನಂದ ಗೋಟೂರು, ಹಿರಿಯ ವೈದ್ಯರಾದ ಕೆ.ಎಸ್.ರಡ್ಡಿ, ಚಂದ್ರಕಾಂತ ಮಂತ್ರಿ, ಪ್ರಯೋಗಶಾಲಾ ತಂತ್ರಜ್ಞ ಬಾಲಾಜಿ ಬಳಿಗಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net